ಚೀನಾ ಜೊತೆಗಿನ ಡೀಲ್ ಸ್ಥಗಿತ : ₹5 ಸಾವಿರ ಕೋಟಿ ಒಪ್ಪಂದಕ್ಕೆ ಬ್ರೇಕ್ ಹಾಕಿದ ಸರ್ಕಾರ
ಭಾರತದ ವಿರುದ್ಧ ಸಂಘರ್ಷಕ್ಕೆ ಇಳಿದಿರುವ ಚೀನಾಗೆ ತಕ್ಕ ಪಾಠ ಕಲಿಸಲು ಇದಾಗಲೇ ಭಾರತ ಮುಂದಾಗಿದೆ. ಚೀನಾಕ್ಕೆ ನೀಡಲಾಗಿರುವ ಕೆಲವು ಗುತ್ತಿಗೆಗಳನ್ನು ಇದಾಗಲೇ ರದ್ದು ಮಾಡಿರುವ ಬೆನ್ನಲ್ಲೇ ಇದೀಗ ಮಹಾರಾಷ್ಟ್ರ ಸರ್ಕಾರ ಕೂಡ ತಾನು ಮಾಡಿಕೊಂಡಿರುವ ಒಪ್ಪಂದಕ್ಕೆ ತಡೆ ನೀಡಿದೆ.
ಮಹಾರಾಷ್ಟ್ರ ಸರ್ಕಾರವು ಇತ್ತೀಚೆಗೆ ಮ್ಯಾಗ್ನೆಟಿಕ್ ಮಹಾರಾಷ್ಟ್ರ 2.0 ಹೂಡಿಕೆದಾರರ ಸಮಾವೇಶದಲ್ಲಿ ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಲಾಗಿತ್ತು.ಆದರೆ ಈಗ ಆ ಒಪ್ಪಂದಗಳನ್ನು ತಡೆಹಿಡಿಯಲಾಗಿದೆ. ಈ ಮೂಲಕ 5,000 ಕೋಟಿ ರೂ. ಮೌಲ್ಯದ ಯೋಜನೆಗೆ ಬ್ರೇಕ್ ಹಾಕಲಾಗಿದೆ. ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಸಲಹೆಯಂತೆ ಚೀನಾ ಮೂಲದ ಕಂಪನಿಗಳ ಜೊತೆ ಯಾವುದೇ ವ್ಯವಹಾರವನ್ನು ಮುಂದುವರೆಸದಿರಲು ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ.
Comments