ಆನ್ಲೈನ್ ಶಿಕ್ಷಣಕ್ಕೆ ಹೊಸ ಮಾರ್ಗಸೂಚಿ ಹೊರಡಿಸಿದ ಸರ್ಕಾರ
ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಮಾರ್ಗಸೂಚಿಯ ಅಂಶಗಳನ್ನು ಪರಿಗಣಿಸಿ ಆನ್ ಲೈನ್ ಶಿಕ್ಷಣಕ್ಕೆ ಸಂಬಂಧಿಸಿದಂತೆ ರಾಜ್ಯ ಪಠ್ಯಕ್ರಮ, ಸಿಬಿಎಸ್ಇ, ಐಸಿಎಸ್ಇ ಸಹಿತ ಎಲ್ಲ ಪಠ್ಯ ಕ್ರಮದ ಶಾಲೆಗಳಿಗೆ ಅನ್ವಯವಾಗು ವಂತೆ ರಾಜ್ಯ ಸರಕಾರ ಹೊಸ ಆದೇಶ ಹೊರಡಿಸಿದೆ. ಆದರೆ ಇದಕ್ಕಾಗಿ ಹೆಚ್ಚುವರಿ ಶುಲ್ಕ ಪಡೆಯದಂತೆ ತಿಳಿಸಿದೆ.
ಪೂರ್ವ ಪ್ರಾಥಮಿಕ ತರಗತಿಗಳಿಗೆ ಆನ್‌ಲೈನ್ ತರಗತಿ ಇರುವುದಿಲ್ಲ. ಆದರೆ 30 ನಿಮಿಷಗಳಿಗೆ ಮೀರದಂತೆ ಪಾಲಕರೊಂದಿಗೆ ಮಾತ್ರ ವಾರಕ್ಕೆ ಒಂದು ದಿನ ಆನ್‌ಲೈನ್ ಸಂವಹನ ಮತ್ತು ಮಾರ್ಗ ದರ್ಶನ ನೀಡಬಹುದು. 1 ರಿಂದ 5ನೇ ತರಗತಿಯ ಮಕ್ಕಳಿಗೆ ದಿನ ಬಿಟ್ಟು ದಿನ ಗರಿಷ್ಠ 3 ದಿನ 30-45 ನಿಮಿಷಗಳ ಎರಡು ಅವಧಿ ಮೀರದಂತೆ ಆನ್ ಲೈನ್ ಶಿಕ್ಷಣವನ್ನು ಸಿಂಕ್ರೋನಸ್ ವಿಧಾನದಲ್ಲಿ ಒದಗಿಸಬಹುದು. 6ರಿಂದ 10ನೇ ತರಗತಿ ಮಕ್ಕಳಿಗೆ ವಾರದಲ್ಲಿ 5 ದಿನ 30-45 ನಿಮಿಷ ಎರಡು ಅವಧಿಯಲ್ಲಿ ಆನ್ ಲೈನ್ ಶಿಕ್ಷಣ ನೀಡಬಹುದು ಎಂದು ಸರ್ಕಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.
Comments