ಕುರಿಗಾಯಿಗೆ ಕೊರೊನಾ ಸೋಂಕು: ಕ್ವಾರಂಟೈನ್ ಗೆ ಒಳಗಾದ ಕುರಿಗಳು
ತುಮಕೂರು ಜಿಲ್ಲೆಯಲ್ಲಿ ಕುರಿ ಮೇಯಿಸುತ್ತಿದ್ದ ವ್ಯಕ್ತಿಗೆ ಕೋವಿಡ್ 19 ಸೋಂಕು ಹರಡಿರುವ ಹಿನ್ನೆಲೆ ಆತ ಮೇಯಿಸುತ್ತಿದ್ದ 40 ಕುರಿಗಳನ್ನೂ ಕ್ವಾರಂ ಟೈನ್ ಮಾಡಲು ಜಿಲ್ಲಾಡಳಿತ ತೀರ್ಮಾನ ಮಾಡಿದೆ. ಈ ಕುರಿಗಳನ್ನು ಸಮೂಹದಲ್ಲಿ ಮೇಯಲು ಬಿಡದಂತೆ ಕ್ರಮ ವಹಿಸ ಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
ಚಿಕ್ಕನಾಯಕನಹಳ್ಳಿ ತಾಲೂಕಿನ ವ್ಯಾಪ್ತಿಯಲ್ಲಿ ಕುರಿ ಮಾಂಸವನ್ನು ಜನರು ಸೇವಿಸುವ ಮುನ್ನ ಪರೀಕ್ಷಿಸಿಕೊಳ್ಳಬೇಕು. ನಂತರವೇ ಅದನ್ನು ಬಳಸಬೇಕು ಎಂದು ಸೂಚಿಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶಿಸಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ. ಸಾಮಾನ್ಯವಾಗಿ ಕುರಿಗಳ ಮೂಲಕ ಕೊರೊನಾ ಸೋಂಕು ಹರಡುವುದಿಲ್ಲ ಎಂಬ ವಿಶ್ವಾಸವಿದೆ. ಆದರೂ ಕೂಡ ಮುಂಜಾಗೃತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕುರಿಗಳ ಸ್ವ್ಯಾಬ್ ಸ್ಯಾಂಪಲ್ಗಳ ವರದಿ ಬಂದ ನಂತರವೇ ಕುರಿಗಳನ್ನು ಮೇಯಲು ಗುಂಪಿನಲ್ಲಿ ಬಿಡಬೇಕೇ ಬೇಡವೇ ಎಂಬುದನ್ನು ನಿರ್ಧರಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಮೂಲಕ ಜಿಲ್ಲೆಯಲ್ಲಿ ಮನೆಮನೆಗೆ ತೆರಳಿ ಆರೋಗ್ಯ ಸಮೀಕ್ಷೆ ಯನ್ನು ಮತ್ತೂಮ್ಮೆ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್ ಅವರಿಗೆ ಸೂಚನೆ ನೀಡಿದರು.
Comments