ಗಣಿ ಕಾರ್ಮಿಕನಿಗೆ ಸಿಕ್ತು ಮೂರು ಬೆಲೆ ಬಾಳುವ ವಜ್ರ

ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿರುವ ಗಣಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಸುಬಲ್ ಎಂಬವರಿಗೆ ಅಂದಾಜು 35 ಲಕ್ಷ ಮೌಲ್ಯದ ಮೂರು ವಜ್ರಗಳನ್ನು ಸಿಕ್ಕಿವೆ. 7.5 ಕ್ಯಾರೆಟ್ ನಿವ್ವಳ ತೂಕದ ಮೂರು ವಜ್ರಗಳನ್ನು ಗಣಿಯಲ್ಲಿ ಸಿಕ್ಕಿವೆ ಎಂದು ಪನ್ನಾ ಜಿಲ್ಲೆಯ ವಜ್ರಾಧಿಕಾರಿ ಆರ್.ಕೆ.ಪಾಂಡೆ ತಿಳಿಸಿದ್ದಾರೆ.
ಈ ವಜ್ರಗಳನ್ನು ಕಾರ್ಮಿಕರ ಸುಬಲ್ ಜಿಲ್ಲಾ ವಜ್ರದ ಕಚೇರಿಗೆ ನೀಡಿದ್ದಾನೆ. ಸರ್ಕಾರದ ನಿಯಮದಂತೆ ವಜ್ರದ ಹರಾಜು ಪ್ರಕ್ರಿಯೆ ನಡೆಯುತ್ತದೆ ಎಂದು ಶ್ರೀ ಪಾಂಡೆ ಹೇಳಿದ್ದಾರೆ. ಜೊತೆಗೆ ಇದರ ಮಾರಾಟದಿಂದ ಬಂದ ಹಣದಲ್ಲಿ ಶೇಕಡಾ 12 ರಷ್ಟು ತೆರಿಗೆಯನ್ನು ಕಡಿತಗೊಳಿಸಿದ ನಂತರ, ಉಳಿದ 88 ಶೇಕಡಾ ಮಾರಾಟದ ಆದಾಯವನ್ನು ಸುಬಲ್ ಅವರಿಗೆ ನೀಡುತ್ತೇವೆ ಎಂದು ಅಧಿಕಾರಿ ತಿಳಿಸಿದ್ದಾರೆ.
Comments