ಸಾರ್ವಜನಿಕ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್: ಷರತ್ತು ಅನ್ವಯ

ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿದ್ದಂತೆ ಈ ಬಾರಿ ಗಣೇಶ ಚತುರ್ಥಿ ಆಚರಣೆಗೆ ಹಲವು ನಿರ್ಬಂಧಗಳನ್ನು ಹೇರಿದ್ದ ರಾಜ್ಯ ಸರ್ಕಾರ ಮಂಗಳವಾರ ಪರಿಷ್ಕೃತಗೊಳಿಸಿದ್ದು, ಇದೀಗ ಹೊಸ ನಿಯಮ ರೂಪಿಸಿ ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಸ್ಥಾಪನೆ ಗ್ರೀನ್ ಸಿಗ್ನಲ್ ನೀಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕರೊನಾ ಪರಿಸ್ಥಿತಿ ಹಿನ್ನೆಲೆ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರಕಾರ ಮಾರ್ಗಸೂಚಿಗಳನ್ನು ರೂಪಿಸಿದೆ. ಕರೊನಾ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಬೇಕು ಎಂದು ಮನವಿ ಮಾಡಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ 4 ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ 2 ಅಡಿ ಮೀರದಂತೆ ಪ್ರತಿಷ್ಠಾಪಿಸಬೇಕು. ಗಣೇಶೋತ್ಸವ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಮನೋರಂಜನೆ, ಸಾಂಸ್ಕೃತಿಕ ಕಾರ್ಯಕ್ರಮ, ಸಂಗೀತ,ನೃತ್ಯ ಕಾರ್ಯಕ್ರಮ ಆಯೋಜನೆಗೆ ನಿಷೇಧವಿದೆ. ಸಾರ್ವಜನಿಕ ಸ್ಥಳದಲ್ಲಿ ಗಣೇಶ್ ಪ್ರತಿಷ್ಠಾಪನೆ ಮಾಡುವ ಸ್ಥಳದಲ್ಲಿ 20 ಜನಕ್ಕೆ ಸೀಮಿತವಾಗಿ ಆವರಣ ನಿರ್ಮಿಸುವುದು.20ಕ್ಕಿಂತ ಹೆಚ್ಚಿನ ಭಕ್ತರು,ಜನರು ಸೇರುವುದಕ್ಕೆ ಅವಕಾಶವಿಲ್ಲ. ಗಣೇಶ್ ಮೂರ್ತಿ ತುರುವಾಗ ಹಾಗೂ ವಿಸರ್ಜನೆ ವೇಳೆ ಮೆರವಣಿಗೆ,ಡಿಜೆ ಸೇರಿದಂತೆ ಯಾವುದೇ ರೀತಿಯ ಆಡಂಬರ,ಗದ್ದಲಕ್ಕೆ ಸಂಪೂರ್ಣ ನಿಷೇಧ ವಿಧಿಸಲಾಗಿದೆ.
Comments