ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಇಂದ್ರಜಿತ್ ಲಂಕೇಶ್ ಗೆ ಸಿಸಿಬಿ ನೋಟಿಸ್
ಸ್ಯಾಂಡಲ್ವುಡ್ ಡ್ರಗ್ಸ್ ದಂಧೆಯ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ರನ್ನ ಇತ್ತಿಚಿಗಷ್ಟೇ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದರು. ಸಧ್ಯ ಇಂದ್ರಜೀತ್ ಅವರಿಗೆ ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟಿಸ್ ನೀಡಿದೆ. ಅದ್ರಂತೆ, ಸಿಸಿಬಿ ವಿಚಾರಣೆಗೆ ಇಂದ್ರಜೀತ್ ಹಾಜರಾಗಲಿದ್ದಾರೆ.
ಮೊನ್ನೆ ಲ್ಯಾಟ್ಟಾಪ್, ಫೈಲ್ಗಳೊಂದಿಗೆ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದ ಇಂದ್ರಜಿತ್ ಲಂಕೇಶ್ ಅವರು ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್ ಜಾಲವಿದೆ. ಹಲವು ಪ್ರಮುಖ ನಟನಟಿಯರೇ ಇದರಲ್ಲಿ ಭಾಗಿಯಾಗಿದ್ದಾರೆ. ನಾನು ನನ್ನ ಮಾತಿಗೆ ಬದ್ಧನಾಗಿದ್ದೇನೆ. ನನಗೆ ಗೊತ್ತಿರುವ ಎಲ್ಲ ವಿಚಾರಗಳನ್ನೂ, ಮಾಹಿತಿಗಳನ್ನೂ ಸಿಸಿಬಿ ಅಧಿಕಾರಿಗಳಿಗೆ ನೀಡಿದ್ದೇನೆ ಎಂದು ಹೇಳಿದ್ದರು.
Comments