ಪ್ರಶಾಂತ್ ಸಂಬರಗಿ ವಿರುದ್ಧ ಶಾಸಕ ಜಮೀರ್ ದೂರು

ಇತ್ತೀಚೆಗೆ ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾ ಪ್ರಕರಣ ವಿಚಾರ ಸಂಬಂಧ ಭಾರೀ ಸುದ್ದಿಯಲ್ಲಿರುವ ಪ್ರಶಾಂತ್ ಸಂಬರಗಿ ವಿರುದ್ಧ ಚಾಮರಾಜಪೇಟೆ ಶಾಸಕ ಜಮೀರ್ ಅಹಮ್ಮದ್ ಖಾನ್ ಪೊಲೀಸರಿಗೆ ದೂರು ನೀಡಿದ್ದಾರೆ.
ಪ್ರಶಾಂತ್ ಸಂಬರಗಿ ಆಧಾರ ರಹಿತ ಆರೋಪ ಮಾಡಿದ್ದು, ನಾನು ಡ್ರಗ್ಸ್ ಪ್ರಕರಣದ ಆರೋಪಿ ನಟಿ ಸಂಜನಾ ಜತೆ ಶ್ರೀಲಂಕಾದ ಕ್ಯಾಸಿನೋದಲ್ಲಿ ಕಾಣಿಸಿಕೊಂಡಿದ್ದೆ ಎಂದಿದ್ದಾರೆ. ಈ ಮೂಲಕ ನನ್ನ ತೇಜೋವಧೆ ಮಾಡಿದ್ದು, ಸಂಬರಗಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ ಎಂದು ಜಮೀರ್ ದೂರಿನಲ್ಲಿ ಮನವಿ ಮಾಡಿದ್ದಾರೆ.
ದೂರಿನ ಬಗ್ಗೆ ಪ್ರತಿಕ್ರಿಯಿಸಿದ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ, ಶಾಸಕ ಜಮೀರ್ ಅವರು ಬುಧವಾರ ದೂರು ನೀಡಿದ್ದಾರೆ. ಅದನ್ನು ಆಧರಿಸಿ ಪ್ರಶಾಂತ್ ಸಂಬರಗಿ ವಿರುದ್ಧ ಎನ್‌ಸಿಆರ್ ದಾಖಲಿಸಲಾಗಿದೆ. ಕೋರ್ಟ್ ಅನುಮತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
Comments