ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ, ಅನಿಲ ಸೋರಿಕೆಗೆ ಬೆಚ್ಚಿಬಿದ್ದ ಜನತೆ!
ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ತುಂಬಿದ ಟ್ಯಾಂಕರ್ ವೊಂದು ರಾಷ್ಟ್ರೀಯ ಹೆದ್ದಾರಿ ಎನ್.ಎಚ್ 66ರ ಹಂದಿಗೋಣ ಸಮೀಪದ ಪಲ್ಟಿಯಾಗಿದೆ. ಮಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ, ರಸ್ತೆಗೆ ಅಡ್ಡವಾಗಿ ಬಿದ್ದಿದೆ. ಟ್ಯಾಂಕರ್ ನಿಂದ ಸಣ್ಣ ಪ್ರಮಾಣದಲ್ಲಿ ಅನಿಲ ಸೋರಿಕೆಯಾಗುತ್ತಿದೆ ಎಂಬ ಮಾಹಿತಿ ಹೊರಬಿದ್ದಿದೆ. ಆದರೆ, ಅನಿಲ ಸೋರಿಕೆಯ ಕುರಿತು ಯಾವುದೇ ಖಚಿತ ಮಾಹಿತಿ ಇಲ್ಲ ಮುನ್ನೆಚ್ಚರಿಕೆ ಕ್ರಮವಾಗಿ ಗ್ಯಾಸ್ ಟ್ಯಾಂಕರ್ ಸಮೀಪ ಯಾರೂ ಹೋಗದಂತೆ ನಿರ್ಭಂದಿಸಲಾಗಿದೆ.
ಗ್ಯಾಸ್ ಟ್ಯಾಂಕರ್ ಬಿದ್ದ ಪರಿಣಾಮ ಕುಮಟಾ-ಹೊನ್ನಾವರ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತವಾಗಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಅನಿಲ ಸೋರಿಕೆ ನಿಯಂತ್ರಿ ಟ್ಯಾಂಕರ್ ಅನ್ನು ಮೇಲಕ್ಕೆತ್ತುವ ಕಾರ್ಯಾಚರಣೆ ನಡೆಸುತ್ತಿದ್ದರು. ವಾಹನಗಳಿಗೆ ಚಂದಾವರ ಮಾರ್ಗದಲ್ಲಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.
Comments