ತಮಿಳು ಖ್ಯಾತ ನಟ ಧನುಷ್, ಡಿಎಂಕೆ ಮುಖಂಡ ವಿಜಯಕಾಂತ್ ಮನೆಗೆ ಬಾಂಬ್ ಬೆದರಿಕೆ!
ತಮಿಳು ನಟ ಧನುಷ್ ಮತ್ತು ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್ ಅವರ ಮನೆಗಳಲ್ಲಿ ಬಾಂಬ್ಗಳನ್ನು ಇರಿಸಲಾಗಿದೆ ಎಂದು ಪೊಲೀಸ್ ನಿಯಂತ್ರಣ ಕೊಠಡಿಗೆ ಮಂಗಳವಾರ ಎರಡು ಹುಸಿ ಬಾಂಬ್ ಕರೆಗಳು ಬಂದಿವೆ.
ಚೆನ್ನೈನ ಧನುಷ್ ಅವರ ಅಭಿರಾಮುಪುರಂ ನಿವಾಸ ಹಾಗೂ ವಿಜಯಕಾಂತ್ ಅವರ ವಿರುಗಂಬಕ್ಕಂನ ಮನೆಯಲ್ಲಿ ಬಾಂಬ್ ಇಡಲಾಗಿದೆ ಎಂದು ಎರಡು ಬಾರಿ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಬಂದಿದೆ. ಬಾಂಬ್ ಬೆದರಿಕೆ ವಿಚಾರ ತಿಳಿಯುತ್ತಿದ್ದಂತೆಯೇ ಪೊಲೀಸ್ ಅಧಿಕಾರಿಗಳು ಕೂಡಲೇ ಇಬ್ಬರ ಮನೆಗಳಿಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮನೆಯಲ್ಲಿ ಏನೂ ಸಿಗಲಿಲ್ಲ. ಹೀಗಾಗಿ ಇದೊಂದು ಸುಳ್ಳು ಬೆದರಿಕೆ ಎಂದು ತಿಳಿಸಿದ್ದಾರೆ.
ನಟ ಧನುಷ್ ಅಭಿರಾಮ್ಪುರಂನಲ್ಲಿ ವಾಸಿಸುತ್ತಿದ್ದಾರೆ. ಅಂತೆಯೇ ವಿಜಯಕಾಂತ್ ವಿರಂಬಕಮ್ ಮನೆಯಲ್ಲಿ ನೆಲೆಸಿದ್ದಾರೆ. ಈ ವೊದಲು ನಟ ರಜನಿಕಾಂತ್ಗೆ ಕರೆ ಮಾಡಿದ್ದ ಮಾನಸಿಕ ವ್ಯಕ್ತಿಯೂ ಈ ಇಬ್ಬರು ನಟರಿಗೆ ಹುಸಿ ಬಾಂಬ್ ಬೆದರಿಕೆಯ ಕರೆ ಮಾಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಹುಸಿ ಬಾಂಬ್ ಕರೆ ಮಾಡಿದ್ದ ಮಾನಸಿಕ ವ್ಯಕ್ತಿ ಪೊಲೀಸರಿಂದ ತಲೆಮರೆಸಿಕೊಂಡಿದ್ದಾನೆ. ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
Comments