ನಟಿ ಹಾಗೂ ಬಿಜೆಪಿ ನಾಯಕಿ ಖುಷ್ಬೂ ಬಂಧನ

ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ನಟಿ ಖುಷ್ಬೂ ಸುಂದರ್ ಗೆ ತಮಿಳುನಾಡು ಪೊಲೀಸರು ಶಾಕ್ ನೀಡಿದ್ದಾರೆ. ಪ್ರತಿಭಟನೆಯೊಂದಕ್ಕೆ ತೆರಳಿದ್ದ ಖುಷ್ಬೂ ಮತ್ತು ಕೆಲವು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ.
ವಿಸಿಕೆ ಅಧ್ಯಕ್ಷ ದೋಳ್ ತಿರುಮಾವಳವನ್ ಅವರು ಮನುಸ್ಮೃತಿ ಉಲ್ಲೇಖಿಸಿ ಮಹಿಳೆಯರ ಬಗ್ಗೆ ಆಡಿದ್ದರು ಎನ್ನಲಾದ ಮಾತುಗಳ ವಿರುದ್ಧ ಬಿಜೆಪಿ ಪ್ರತಿಭಟನೆ ಆಯೋಜಿಸಿತ್ತು. ಅದರಲ್ಲಿ ಪಾಲ್ಗೊಳ್ಳಲು ಖುಷ್ಬೂ ಅವರು ಚಿದಂಬರಂಗೆ ತೆರಳುತ್ತಿದ್ದಾಗ ಮಾರ್ಗಮಧ್ಯೆ ಅವರನ್ನು ಬಂಧಿಸಲಾಗಿದೆ.
ಮಹಿಳೆಯರ ಗೌರವಕ್ಕಾಗಿ ನಮ್ಮ ಕೊನೆ ಉಸಿರಿನವರೆಗೂ ಹೋರಾಡುತ್ತೇವೆ. ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರು ಯಾವಾಗಲೂ ಮಹಿಳೆಯರ ಸುರಕ್ಷತೆ ಬಗ್ಗೆ ಮಾತನಾಡುತ್ತಾರೆ. ನಾವು ಅವರ ಹಾದಿಯಲ್ಲಿ ಸಾಗುತ್ತಿದ್ದೇವೆ. ಕೆಲವು ಕೆಟ್ಟ ವ್ಯಕ್ತಿಗಳ ದೌರ್ಜನ್ಯಕ್ಕೆ ನಾವು ಮಂಡಿಯೂರುವುದಿಲ್ಲ. ಭಾರತ್ ಮಾತಾ ಕಿ ಜೈ' ಎಂದು ಖುಷ್ಬೂ ಟ್ವೀಟ್ ಮಾಡಿದ್ದಾರೆ.
Comments