ಬಾಬ್ರಿ ಮಸೀದಿ ತೀರ್ಪು ನೀಡಿದ್ದ ನಿವೃತ್ತ ಜಡ್ಜ್ ಗೆ ಭದ್ರತೆ ನೀಡಲು ಸುಪ್ರೀಂಕೋರ್ಟ್ ನಕಾರ

ಬಾಬರಿ ಮಸೀದಿ ಪ್ರಕರಣದ ತೀರ್ಪು ನೀಡಿದ್ದ ವಿಶೇಷ ಕೋರ್ಟ್ ನ ನಿವೃತ್ತ ನ್ಯಾಯಾಧೀಶರಾದ ಸುರೇಂದ್ರ ಕುಮಾರ್ ಯಾದವ್ ಅವರಿಗೆ ನೀಡಿದ್ದ ಭದ್ರತೆಯನ್ನು ವಿಸ್ತರಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ನ್ಯಾಯಮೂರ್ತಿಗಳಾದ ಆರ್.ಎಫ್. ನಾರಿಮನ್, ನವೀನ್ ಸಿನ್ಹಾ, ಕೃಷ್ಣ ಮುರಾರಿ ಅವರನ್ನು ಒಳಗೊಂಡ ನ್ಯಾಯಪೀಠ ನ್ಯಾಯಾಧೀಶ ಯಾದವ್ ಅವರಿಗೆ ನೀಡಲಾಗಿದ್ದ ಭದ್ರತೆಯನ್ನು ವಿಸ್ತರಿಸುವುದು ಸೂಕ್ತವಲ್ಲ ಎಂಬುದು ನ್ಯಾಯಪೀಠದ ಅಭಿಪ್ರಾಯವಾಗಿದೆ ಎಂದು ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸ್ಥಾಪಕ ಸದಸ್ಯ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಉಮಾ ಭಾರತಿ ಸೇರಿದಂತೆ ಎಲ್ಲಾ 32 ಆರೋಪಿಗಳನ್ನು ಉತ್ತರಪ್ರದೇಶ ಲಕ್ನೋ ವಿಶೇಷ ಕೋರ್ಟ್ ಜಡ್ಜ್ ಯಾದವ್ ಅವರು ಸೆಪ್ಟೆಂಬರ್ 30ರಂದು ಖುಲಾಸೆಗೊಳಿಸಿ ಅಂತಿಮ ತೀರ್ಪು ಪ್ರಕಟಿಸಿದ್ದರು.
Comments