ಪೆಟ್ರೋಲ್ ಡೀಸೆಲ್ ದರದಲ್ಲಿ ಸತತ ನಾಲ್ಕನೇ ದಿನವೂ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರದಲ್ಲಿ ಏರಿಕೆ ಕಾಣಲು ಆರಂಭಿಸುತ್ತಿದ್ದಂತೆ ಪ್ರಮುಖ ನಗರಗಳಲ್ಲೂ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಏರಿಕೆ ಕಾಣುತ್ತಿದೆ. ಕ್ರೂರಿ ಕೊರೊನಾ ಮತ್ತು ಲಾಕ್ಡೌನ್ ಕಾರಣಗಳಿಂದ ಜನ ಸಾಮಾನ್ಯರು ಕಷ್ಟದಲ್ಲಿದ್ದರೂ, ಸಾರ್ವಜನಿಕರು ವ್ಯಾಪಕವಾದ ವಿರೋಧ ವ್ಯಕ್ತಪಡಿಸುತ್ತಿದ್ದರೂ ಇದ್ಯಾವುದನ್ನೂ ಪರಿಗಣಿಸದ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡುತ್ತಲೇ ಇದೆ.
ಇಂದು ಬೆಂಗಳೂರಿನಲ್ಲಿ ಪೆಟ್ರೋಲ್ ದರ 84.18 ರೂ. ಇದ್ದರೆ, ಡೀಸೆಲ್ ಬೆಲೆ ಲೀಟರ್ ಗೆ 75.34 ರೂ.ತಲುಪಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 81.53 ರೂ. ಇದ್ದರೆ, ಡೀಸೆಲ್ ಬೆಲೆ 71.25 ರೂ. ಇದೆ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 84.59 ರೂ. ಡೀಸೆಲ್ ಬೆಲೆ ಲೀಟರ್ ಗೆ 76.52 ರೂ. ಗೆ ತಲುಪಿದೆ.
Comments