ಉಪವಾಸ ಸತ್ಯಾಗ್ರಹಕ್ಕೆ ಮುಂದಾದ ರೈತರು

ಕೇಂದ್ರ ಸರಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾಯ್ದೆಗಳಿಗೆ ದೇಶದ ಉದ್ದಗಲಕ್ಕೂ ರೈತರು ಹೋರಾಟ ನಡೆಸುತ್ತಿದ್ದು, ದೆಹಲಿಯ ಗಡಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನಾ ನಿರತರು ರೈತರು ಸೋಮವಾರದಿಂದ ಅನಿರ್ದಿಷ್ಟಾವಧಿಗೆ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ.
ರೈತರು ಈವರೆಗೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ಥೋಮರ್ ಜೊತೆ ಐದು ಅಧಿಕೃತ ಸಭೆಗಳಲ್ಲಿ ಹಾಗೂ ಗೃಹ ಸಚಿವ ಅಮಿತ್ ಶಾ ಜೊತೆ ಒಂದು ಅನೌಪಚಾರಿಕ ಸಭೆಯಲ್ಲಿ ಪಾಲ್ಗೊಂಡು 'ಕೇಂದ್ರ ಸರ್ಕಾರ ಇತ್ತೀಚೆಗೆ ತಂದಿರುವ ಮೂರು ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯಲೇಬೇಕು. ರೈತರ ಎಲ್ಲಾ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆ ಕೊಡಬೇಕು. ಜೊತೆಗೆ ರೈತರಿಗೆ ಮಾರಕವಾಗಿರುವ ವಿದ್ಯುತ್ ಕಾನೂನನ್ನು ವಾಪಸ್ ಪಡೆಯಲೇಬೇಕು' ಎಂದು ತಮ್ಮ ನಿಲುವನ್ನು ಬಲವಾಗಿ ಪ್ರತಿಪಾದಿಸಿದ್ದಾರೆ.
Comments