ನೂತನ ಕೃಷಿ ಕಾನೂನುಗಳ ವಿರುದ್ಧ ದೆಹಲಿ ಗಡಿಗಳಲ್ಲಿ ಇಂದು ರೈತರಿಂದ ಟ್ರ್ಯಾಕ್ಟರ್ ಮೆರವಣಿಗೆ!

ನೂತನ ಕೃಷಿ ಕಾನೂನುಗಳ ವಿರುದ್ಧ ರಾಷ್ಟ್ರ ರಾಜಧಾನಿಯ ಸಿಂಗು, ಟಿಕ್ರಿ ಮತ್ತು ಘಾಜಿಪುರ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಸ್ಥಳದಿಂದ ಸಹಸ್ರಾರು ರೈತರು ಗುರುವಾರ ಟ್ರಾಕ್ಟರ್ ಮೆರವಣಿಗೆ ಪ್ರಾರಂಭಿಸಿದ್ದಾರೆ. ಕೇಂದ್ರ ಸರ್ಕಾರದೊಂದಿಗೆ 7ನೇ ಸುತ್ತಿನ ಮಾತುಕತೆಯೂ ವಿಫಲವಾದ ನಂತರ ರೈತರು ಈ ತೀರ್ಮಾನಕ್ಕೆ ಬಂದಿದ್ದಾರೆ.
ತಮ್ಮ ಬೇಡಿಕೆಗಳು ಜ.26 ಕ್ಕಿಂತ ಮೊದಲು ಈಡೇರದಿದ್ದರೆ, ಗಣರಾಜ್ಯೋತ್ಸವ ದಿನದಂದು ದೆಹಲಿಯ ರಸ್ತೆಗಳಲ್ಲಿ ಟ್ರ್ಯಾಕ್ಟರ್ ಪರೇಡ್ ನಡೆಸುವುದಾಗಿ ಈ ಮುಷ್ಕರದ ನೇತೃತ್ವ ವಹಿಸಿರುವ ಸಂಯುಕ್ತ್ ಕಿಸಾನ್ ಮೋರ್ಚಾ ಹೇಳಿದೆ.
ಕೇಂದ್ರ ಸರ್ಕಾರ ಇತ್ತೀಚೆಗೆ ತಂದಿರುವ ಮೂರು ರೈತ ವಿರೋಧಿ ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು. ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನಡಿಯಲ್ಲಿ ಖಾತರಿ ಒದಗಿಸಬೇಕು ಹಾಗೂ ರೈತರ ಪಾಲಿಗೆ ಮಾರಕವಾಗಲಿರುವ ವಿದ್ಯುತ್ ಕಾನೂನನ್ನು ರದ್ದುಗೊಳಿಸಬೇಕು ಎಂಬುದು ರೈತರ ಬೇಡಿಕೆಗಳು.
Comments