CBSE 10 ಮತ್ತು 12ನೇ ತರಗತಿಯ ಪರೀಕ್ಷೆ ವೇಳಾಪಟ್ಟಿ ಪ್ರಕಟ

02 Feb 2021 8:18 PM | General
362 Report

ಸಿಬಿಎಸ್ಇ 10 ಮತ್ತು 12 ನೇ ತರಗತಿಗೆ ಪರೀಕ್ಷಾ ವೇಳಾ ಪಟ್ಟಿ ಪ್ರಕಟಿಸಲಾಗಿದ್ದು, ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ಈ ಬಗ್ಗೆ ತಮ್ಮ ಟ್ವಿಟ್ಟರ್ ಅಕೌಂಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಕೆಂದ್ರ ಶಿಕ್ಷಣ ಇಲಾಖೆ ಸಚಿವ ರಮೇಶ್ ಪೋಖ್ರಿಯಾಲ್ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಪರೀಕ್ಷೆಗಳು ಮುಂಬರುವ ಮೇ 4 ರಿಂದ ಆರಂಭಗೊಂಡು ಜೂನ್ 10 ಕ್ಕೆ ಕೊನೆಗೊಳ್ಳಲಿದೆ. ವಿದ್ಯಾರ್ಥಿಗಳು ವೆಬ್ ಸೈಟ್ ಮೂಲಕ ವೇಳಾಪಟ್ಟಿಯನ್ನು ನೋಡಬಹುದಾಗಿದೆ. ಸಿಬಿಎಸ್‌ಇ 10 ಮತ್ತು 12ನೇ ತರಗತಿಗಳ ಬೋರ್ಡ್ ಪರೀಕ್ಷೆಗಳು ಆಫ್‌ಲೈನ್‌ನಲ್ಲಿ ನಡೆಯಲಿವೆ. ಅಂದರೆ ವಿದ್ಯಾರ್ಥಿಗಳು ಖುದ್ದು ಹಾಜರಾಗಿ ಪರೀಕ್ಷೆ ಬರೆಯಬೇಕಿದೆ.

2021ನೇ ಸಾಲಿನಲ್ಲಿ ಸಿಬಿಎಸ್ ಇ ಪರೀಕ್ಷೆಗೆ ಸುಮಾರು 30 ಲಕ್ಷ ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಹತ್ತನೇ ತರಗತಿ ಮತ್ತು 12ನೇ ತರಗತಿಯ ಪರೀಕ್ಷಾ ವೇಳಾಪಟ್ಟಿಯನ್ನು ಔಪಚಾರಿಕವಾಗಿ ಘೋಷಿಸಿದ್ದು, ಈ ವೇಳಾಪಟ್ಟಿ ಅಧಿಕೃತ ವೆಬ್ ಸೈಟ್ (cbse.nic.in)ನಲ್ಲಿ ಲಭ್ಯವಿದೆ ಎಂದು ತಿಳಿಸಿದ್ದಾರೆ.

Edited By

venki swamy

Reported By

venki swamy

Comments