9 ಬೇಡಿಕೆಗಳ ಈಡೇರಿಕೆಗಾಗಿ ಇಂದಿನಿಂದ ಸಾರಿಗೆ ನೌಕರರ ಪ್ರತಿಭಟನೆ
9 ಬೇಡಿಕೆಗಳನ್ನು ಇನ್ನು ಈಡೇರಿಸದ ಹಿನ್ನೆಲೆಯಲ್ಲಿ ಇಂದಿನಿಂದ ಸಾರಿಗೆ ನೌಕರರು ಸರ್ಕಾರದ ವಿರುದ್ಧ ಕಪ್ಪು ಪಟ್ಟಿ ಚಳುವಳಿ ನಡೆಸಲಿದ್ದಾರೆ. ಏಪ್ರಿಲ್ 7 ರಂದು ಎಲ್ಲ ಸಾರಿಗೆ, ಬಸ್ ಗಳು ಸ್ತಬ್ದವಾಗಲಿದ್ದು, ಇಂದಿನಿಂದಲೇ ಸರ್ಕಾರದ ವಿರುದ್ಧ ಸಾರಿಗೆ ನೌಕರರು ಸಮರ ಸಾರಿದ್ದಾರೆ.
ಸಾರಿಗೆ ನೌಕರರ ಕೂಟದ ಗೌರವ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಚಳುವಳಿ ಆರಂಭವಾಗಿದ್ದು, ಇಂದಿನಿಂದ ನಡೆಯುವ 7 ದಿನಗಳ ಹೋರಾಟದ ರೂಪುರೇಷೆ ಹೀಗಿದೆ. ಇಂದು ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಸಾರಿಗೆ ನೌಕರರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಿದ್ದಾರೆ. ಏಪ್ರಿಲ್ 2ರಂದು ಬೆಂಗಳೂರಿನ ಸರ್ಕಲ್ ಗಳಲ್ಲಿ ಕುಟುಂಬದವರೊಂದಿಗೆ ಸೇರಿಕೊಂಡು ಬಜ್ಜಿ- ಬೋಂಡ ಮಾರಾಟ ಮಾಡಲಿದ್ದಾರೆ. ಏಪ್ರಿಲ್ 3ರಂದು ನೌಕರರು ಹಾಗೂ ಅವರ ಕುಟುಂಬದವರೊಂದಿಗೆ ನಗರಗಳ ಸರ್ಕಲ್ ಗಳಲ್ಲಿ ಮಾನವ ಸರಪಳಿ ನಿರ್ಮಿಸಿ, ಭಿತ್ತಿಪತ್ರ ಪ್ರದರ್ಶನ ಮಾಡಲಿದ್ದಾರೆ. ಏಪ್ರಿಲ್ 4ರಂದು ಸಾರ್ವಜನಿಕರಿಗೆ ಕರಪತ್ರ ಹಂಚಲಿರುವ ಸಾರಿಗೆ ನೌಕರರು ಏಪ್ರಿಲ್ 5ರಂದು ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ. ಏಪ್ರಿಲ್ 6ರಂದು ಸಾಮೂಹಿಕ ಉಪವಾಸ ಸತ್ಯಾಗ್ರಹ ನಡೆಸಲಿದ್ದು, ಏಪ್ರಿಲ್ 7ರಿಂದ ಕರ್ನಾಟಕದಾದ್ಯಂತ ಬಸ್ ಸಂಚಾರ ಸ್ಥಗಿತಗೊಳಿಸಲಿದ್ದಾರೆ. ಇಂದಿನಿಂದ ಏಪ್ರಿಲ್ 7ರವರೆಗೆ ಸಾರಿಗೆ ನೌಕರರ ಪ್ರತಿಭಟನೆ ನಡೆಯಲಿದೆ.
Comments