ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸರ ವಶಕ್ಕೆ

10 Apr 2021 1:33 PM | General
1088 Report

6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಮುಷ್ಕರ ಇನ್ನಷ್ಟು ತೀವ್ರಗೊಳಿಸಲು ಸಿದ್ಧತೆ ನಡೆಸುತ್ತಿದ್ದ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬೆಳಗಾವಿ ಕ್ಯಾಂಪ್ ಪೊಲೀಸರು ಶನಿವಾರ ಬೆಳಗ್ಗೆ ವಶಕ್ಕೆ ಪಡೆದುಕೊಂಡರು.

ಬೆಳಗಾವಿಯ ಸುವರ್ಣ ಸೌಧದ ಬಳಿಯ ಸಭಾಂಗಣದಲ್ಲಿ ರೈತರು, ಸಾರಿಗೆ ನೌಕರರ ಜೊತೆಗೆ ಸಭೆ ನಡೆಸಲು ಕೋಡಿಹಳ್ಳಿ ಆಗಮಿಸಿದ್ದರು. ನಗರದ ಚನ್ನಮ್ಮ ವೃತ್ತದ ಬಳಿಯ ಮಿಲನ್ ಹೋಟೆಲ್‍ನಿಂದ ಹೊರ ಬರುತ್ತಿದ್ದಂತೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Edited By

venki swamy

Reported By

venki swamy

Comments