ಕರ್ನಾಟಕದಲ್ಲಿ ಇನ್ನೂ ಮೂರು ದಿನ ವರುಣನ ಆರ್ಭಟ
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಇನ್ನೂ ಮೂರುದಿನ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಯುವ್ಯ ಮತ್ತು ಪಶ್ಚಿಮ ಮಧ್ಯ ಬಂಗಾಳ ಕೊಲ್ಲಿಯ ಮೇಲೆ ಒತ್ತಡವಿದ್ದು, ಸೈಕ್ಲೋನಿಕ್ ಸರಾಸರಿ ಸಮುದ್ರ ಮಟ್ಟಕ್ಕಿಂತ 7.6 ಕಿಮೀ ವರೆಗೆ ವಿಸ್ತರಿಸುತ್ತಿದೆ. ಇದು ಪಶ್ಚಿಮ ವಾಯುವ್ಯ ದಿಕ್ಕಿನಲ್ಲಿ ಚಲಿಸುವ ನಿರೀಕ್ಷೆಯಿದ್ದು, ಮುಂದಿನ 24 ಗಂಟೆಗಳಲ್ಲಿ ಭಾರತದ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಹಲವೆಡೆ ಸಾಧಾರಣ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಬೇರೆ ಜಿಲ್ಲೆಗಳಿಗಿಂತ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಉತ್ತರ ಕರ್ನಾಟಕದ ರಾಯಚೂರು, ಯಾದಗಿರಿ, ಬೆಳಗಾವಿ, ಗದಗ, ಧಾರವಾಡ, ಹಾವೇರಿ ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Comments