ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನಕ್ಕೆ ತಿರುಗೇಟು ಕೊಟ್ಟ ಭಾರತ
ಕಾಶ್ಮೀರ ಕುರಿತು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಆಡಿದ ಮಾತಿಗೆ ಭಾರತದ ಪ್ರಥಮ ಕಾರ್ಯದರ್ಶಿ ಸ್ನೇಹಾ ದುಬೆ ಅವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆ (ಯುಎನ್ಜಿಎ) ಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಪಾಕ್ನ ಕರಾಳ ಮುಖವನ್ನು ಜಗತ್ತಿನ ಎದುರು ತೆರೆದಿಟ್ಟಿದ್ದಾರೆ.
ಭಾರತದ ಪ್ರತಿನಿಧಿ ಸ್ನೇಹಾ ದುಬೆ ಅವರು ಶುಕ್ರವಾರ 76 ನೇ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ(ಯುಎನ್ ಜಿಎ) ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ವರ್ಚುವಲ್ ಭಾಷಣ 'ಸುಳ್ಳು ಮತ್ತು ದುರುದ್ದೇಶಪೂರಿತ'ವಾಗಿದೆ ಎಂದು ಟೀಕಿಸಿದ್ದಾರೆ.
ಪಾಕಿಸ್ತಾನದ ಪ್ರಧಾನಿಗೆ ತಿರುಗೇಟು ನೀಡಿದ ದುಬೆ, ದುರದೃಷ್ಟವಶಾತ್ ಪಾಕಿಸ್ತಾನದ ನಾಯಕ ವಿಶ್ವಸಂಸ್ಥೆ ವೇದಿಕೆಗಳನ್ನು ನನ್ನ ದೇಶದ ವಿರುದ್ಧ ಸುಳ್ಳು ಮತ್ತು ದುರುದ್ದೇಶಪೂರಿತ ಪ್ರಚಾರಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ವಿಶ್ವದ ಗಮನವನ್ನು ಬೇರೆಡೆ ಸೆಳೆಯಲು ವ್ಯರ್ಥವಾಗಿ ಪ್ರಯತ್ನಿಸುವುದು ಇದೇ ಮೊದಲಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Comments