ಶಿವಕುಮಾರ ಸ್ವಾಮೀಜಿ ಆರೋಗ್ಯ ವಿಚಾರಿಸಿದ ಪ್ರಧಾನಿ
ಸ್ವಾಮೀಜಿಯವರಿಗೆ ನನ್ನ ಪ್ರಣಾಮಗಳನ್ನು ತಿಳಿಸಿ. ಶೀಘ್ರದಲ್ಲೇ ಮಠಕ್ಕೆ ಭೇಟಿ ನೀಡುತ್ತೇನೆ ಎಂದು ಪ್ರಧಾನಿ ಹೇಳಿದರು
ಪಿತ್ತನಾಳ ಸೋಂಕಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಚೇತರಿಸಿಕೊಳ್ಳುತ್ತಿರುವ ಸಿದ್ದಗಂಗಾ ಮಠಾಧೀಶ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಂಜೆ ದೂರವಾಣಿ ಕರೆ ಮಾಡಿ ವಿಚಾರಿಸಿದರು.
ಮಠದ ಅಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿ ಅವರಿಗೆ ಕರೆ ಮಾಡಿದ ಪ್ರಧಾನಿ, ಸ್ವಾಮೀಜಿಯವರ ಆರೋಗ್ಯ ಸಮಸ್ಯೆ, ಚಿಕಿತ್ಸೆಯ ಬಗ್ಗೆ ಮಾಹಿತಿ ಪಡೆದುಕೊಂಡರು.
‘ಸ್ವಾಮೀಜಿಯವರಿಗೆ ನನ್ನ ಪ್ರಣಾಮಗಳನ್ನು ತಿಳಿಸಿ. ಶೀಘ್ರದಲ್ಲೇ ಮಠಕ್ಕೆ ಭೇಟಿ ನೀಡುತ್ತೇನೆ ಎಂದು ಪ್ರಧಾನಿ ಹೇಳಿದರು’ ಎಂದು ಮಠದ ಪ್ರಕಟಣೆ ತಿಳಿಸಿದೆ.
Comments