ಚುನಾವಣೆಯಲ್ಲಿ ಗಿಮಿಕ್ ಮಾಡಬೇಡಿ
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆ ಸಿದ್ಧತೆ ಅಂಗವಾಗಿ ಬೆಂಗಳೂರು ಮಹಾನಗರ ಜೆಡಿಎಸ್ ಘಟಕ ಆಯೋಜಿಸಿದ್ದ 'ಮನೆ ಮನೆ ಕುಮಾರಣ್ಣ' ಎಂಬ ಸಂದೇಶ ಸಾರುವ ಪಾದಯಾತ್ರೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಚಾಲನೆ ನೀಡಿದ್ದಾರೆ.
ಗಾಂಧಿನಗರದಲ್ಲಿ ಅಣ್ಣಮ್ಮ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿರುವ ಅವರು, ಕೇಂದ್ರ ಸರ್ಕಾರ ಸಾಲ ಮನ್ನಾ ಮಾಡಲಿ ಎಂದು ಕಾಯಬೇಡಿ, ಮೊದಲು ನೀವು ರೈತರ ಸಾಲ ಮನ್ನಾ ಮಾಡಿ, ಚುನಾವಣೆ ಬಂದಾಗ ನೀವು ಗಿಮಿಕ್ ಮಾಡಬೇಡಿ, ಮೊದಲು ರೈತರ ಸಹಕಾರಿ ಸಾಲ ಮನ್ನಾ ಮಾಡಿ, ಇನ್ನಷ್ಟು ರೈತರನ್ನು ಬಲಿ ತೆಗೆದುಕೊಳ್ಳುತ್ತೀರಾ? ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ರು.
ಮುಂದಿನ ಚುನಾವಣೆ ಉತ್ತರಕರ್ನಾಟಕದಿಂದ ಸ್ಪರ್ಧೆ ಮಾಡಬೇಕೆಂದು ಅಲ್ಲಿನ ಜನ ಒತ್ತಾಯ ಮಾಡುತ್ತಿದ್ದಾರೆ. ಚುನಾವಣೆ ಹತ್ತಿರ ಬಂದಾಗ ಸ್ಪರ್ಧೆ ಬಗ್ಗೆ ನಿರ್ಧಾರ ಮಾ಼ಡುತ್ತೇನೆ ಎಂದು ಸ್ಪಷ್ಟಪಡಿಸಿದರು.
Comments