ಜೆಡಿಎಸ್ ಭಿನ್ನರಿಗೆ ಸಿಎಂ ಸಿದ್ದರಾಮಯ್ಯ ಅಭಯ?

ಬೆಂಗಳೂರು: ಜೆಡಿಎಸ್ ನ ಏಳು ಮಂದಿ ಭಿನ್ನರಿಗೆ ಬಿಜೆಪಿಯವರು ಗಾಳ ಹಾಕುತ್ತಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಏಳು ಮಂದಿ ಭಿನ್ನರಿಗೆ ಖುದ್ದು ಸೋನಿಯಾ ಗಾಂಧಿ ಅವರ ಮೂಲಕ ಟಿಕೆಟ್ ಭಾಗ್ಯದ ಭರವಸೆ ಕೊಡಿಸಲು ಸಿಎಂ ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.
ಈ ಮಧ್ಯೆ ಏಳು ಮಂದಿ ಶಾಸಕರ ಕ್ಷೇತ್ರದಲ್ಲಿ ಸ್ಥಳೀಯ ನಾಯಕರ ವಿರೋಧ ವ್ಯಕ್ತವಾಗದಂತೆ ನೋಡಿಕೊಳ್ಳಲು ಕ್ರಮ ಕೈಗೊಳ್ಳಲು ಸಿದ್ದರಾಮಯ್ಯ ಮಾಗಡಿ ಕ್ಷೇತ್ರದಲ್ಲಿ ಬಾಲಕೃಷ್ಣ ಅವರಿಗೆ ಅಡ್ಡಿಯಾಗಿರುವ ಮಂಜು ಅವರಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನ ಸೀಗುವಂತೆ ಮಾಡುವುದಾಗಿ ಹೇಳಿದ್ದಾರೆ ಎನ್ನಲಾಗುತ್ತಿದೆ.
ರಾಜ್ಯ ವಿಧಾನಮಂಡಲ ಅಧಿವೇಶನ ಮುಗಿದ ತಕ್ಷಣ ಶಾಸಕರಾದ ಚೆಲುವರಾಯಸ್ವಾಮಿ, ಬಾಲಕೃಷ್ಣ, ಜಮೀರ್ ಅಹ್ಮದ್ ಖಾನ್, ಅಖಂಡ ಶ್ರೀನಿವಾಸ್ ಮೂರ್ತಿ ಸೇರಿದಂತೆ ಏಳು ಮಂದಿ ಶಾಸಕರನ್ನು ದೆಹಲಿಗೆ ಕರೆದುಕೊಂಡು ಹೋಗಲು ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ ಎನ್ನಲಾಗುತ್ತಿದೆ.
Comments