ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ

08 Jun 2017 2:09 PM | Politics
322 Report

ಬೆಂಗಳೂರು: ಮುಂದಿನ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮತ್ತೊಮ್ಮೆ ಧೂಳಿಪಟವಾಗಿಲಿದ್ದು, ಕಾಂಗ್ರೆಸ್ ಮತ್ತೊಂದು ಅವಧಿಕೆ ಅಧಿಕಾರಕ್ಕೆ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು. ನಗರ ಕಾಂಗ್ರೆಸ್ ಕಚೇರಿಯಲ್ಲಿ  ನಡೆದ ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ನೂತನ ರಾಜ್ಯಾಧ್ಯಕ್ಷ ಬಸನಗೌಡ ಬಾರ್ದಲಿ ಸೇರಿದಂತೆ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ತಾವೇ ಮುಂದಿನ ಸಿಎಂ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಬಿಜೆಪಿಯವರು ಮಿಷನ್ ೧೫೦ ಎಂದು ಹೊರಟಿದ್ದಾರೆ. ಜೆಡಿಎಸ್ ನಾವೇ ಅಧಿಕಾರಕ್ಕೆ ಬರುತ್ತೇವೆ ಎನ್ನುತ್ತಿದೆ. ಆದರೆ ವಾಸ್ತವಿಕವಾಗಿ ಈ ಎರಡು ಪಕ್ಷಗಳು ಮತ್ತೊಮ್ಮೆ ಜನರಿಂದ ತಿರಸ್ಕೃತಗೊಳ್ಳಲಿದೆ ಎಂದರು.

Edited By

Shruthi G

Reported By

Sudha Ujja

Comments