ಅರವಿಂದ್ ಕೇಜ್ರಿವಾಲ್ ರಾಜೀನಾಮೆ ನೀಡಲಿ- ಶಾಂತಿ ಭೂಷಣ್
ನವದೆಹಲಿ : ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಪಕ್ಷದ ಹಿರಿಯ ನಾಯಕ ಶಾಂತಿ ಭೂಷಣ್ ಒತ್ತಾಯಿಸಿದ್ದಾರೆ.
ಕಪಿಲ್ ಮಿಶ್ರಾಗೆ ಬೆಂಬಲ ವ್ಯಕ್ತಪಡಿಸಿರುವ ಅವರು, ಕಪಿಲ್ ಮಿಶ್ರಾ ಅರವಿಂದ್ ಕೇಜ್ರಿವಾಲ್ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ಆಮ್ ಆದ್ಮಿ ಪಕ್ಷದ ಸಿದ್ಧಾಂತದ ಪ್ರಕಾರ ಯಾವುದೇ ಸಚಿವರ ಮೇಲೆ ಆರೋಪ ಕೇಳಿ ಬಂದಾಗ ತನಿಖೆ ನಡೆಯುವವರೆಗೂ ಯಾರೇ ಆಗಲಿ ತಮ್ಮ ಸಚಿವ ಸ್ಥಾನದಿಂದ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಹೇಳಿದರು.
ಅರವಿಂದ್ ಕೇಜ್ರಿವಾಲ್ ವಿರುದ್ಧ ಕಪಿಲ್ ಮಿಶ್ರಾ ಮಾಡಿರುವ ಎಲ್ಲಾ ಆರೋಪಗಳ ಬಗ್ಗೆ ಕೇಜ್ರಿವಾಲ್ ಉತ್ತರ ನೀಡಬೇಕು. ಪಕ್ಷದ ಸಚಿವ ಸತ್ಯೇಂದ್ರ ಜೈನ್ ಅವರ ಬೇನಾಮಿ ಸಂಪತ್ತಿನ ಬಗ್ಗೆ ಹಾಗೂ ಅವರು ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದರ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದರು. ಪ್ರಶಾಂತ್ ಭೂಷಣ ಹಾಗೂ ಯೋಗೇಂದ್ರ ಯಾದವ್ ರನ್ನು ಪಕ್ಷದಿಂದ ಹೊರಹಾಕಲಾಯಿತು. ಯಾಕೆಂದರೆ ಇವರಿಬ್ಬರು ಕೆಟ್ಟ ಕಾರ್ಯಗಳನ್ನು ವಿರೋಧಿಸುತ್ತಿದ್ದರು ಎಂದು ತಿಳಿಸಿದರು.
Comments