ಎಚ್.ಡಿ ಕುಮಾರಸ್ವಾಮಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಮಂಗಳವಾರ ಇಂದು ವಿಚಾರಣೆ ನಡೆಸಿದ ಲೋಕಾಯುಕ್ತ ವಿಶೇಷ ನ್ಯಾಯಾಲಯ ಎಚ್.ಡಿ ಕುಮಾರಸ್ವಾಮಿ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನುಕೋರ್ಟ್ ವಜಾಗೊಳಿಸಿದೆ.
ಎಚ್.ಡಿ ಕುಮಾರಸ್ವಾಮಿ ಅವರು ಜಂತಕಲ್ ಮೈನಿಂಗ್ ಕಂಪನಿ ಇಂದ ಲಂಚ ಪಡೆದಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ. ಈ ಸಂಬಂಧ ಬಂಧನ ಭೀತಿಯಿಂದ ಕುಮಾರಸ್ವಾಮಿ ಅವರು ನಿರೀಕ್ಷಣಾ ಜಾಮೀನು ಕೋರಿದ್ದರು.
ಇಂದು ವಿಚಾರಣೆ ನಡೆಸಿದ ವೇಳೆ ಎಚ್ .ಡಿ ಕುಮಾರಸ್ವಾಮಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಗೊಳಿಸಿದೆ. ಎಚ್.ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜಂತಕಲ್ ಮೈನಿಂಗ್ ವಿಶ್ವಭಾರತಿ ಹೌಸಿಂಗ್ ಕೋ ಅಪರೇಟಿವ್ ಸೊಸೈಟಿಯಿಂದ ಪತ್ನಿ ಅನಿತಾ ಕುಮಾರಸ್ವಾಮಿ ಅವರ ಹೆಸರಿಗೆ ನಿವೇಶನ ಹಂಚಿಕೆ ಮಾಡಲಾಗಿತ್ತು ಎಂದು ದೂರು ಸಲ್ಲಿಕೆಯಾಗಿತ್ತು. ಈ ಹಿಂದೆ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿತ್ತು.
Comments