ರಾಜ್ಯ ಸಚಿವ ಸಂಪುಟದಲ್ಲಿ ಮೂರು ಮಂದಿಗೆ ಅವಕಾಶ ಸಂಭವ?
ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಸ್ಥಾನಗಳ ಭರ್ತಿ ಮಾಡುವ ಸಾಧ್ಯತೆ ಇದ್ದು, ಮಾತುಕತೆ ಬಗ್ಗೆ ಹೈಕಮಾಂಡ್ ಜೊತೆಗೆ ಚರ್ಚಿಸಲು ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಮುಂದಿನ ಜುಲೈ ಮೊದಲ ವಾರದಲ್ಲಿ ದೆಹಲಿಗೆ ತೆರಳಿಲಿದ್ದಾರೆ.
ಇದೇ ವೇಳೆ ಸಚಿವ ಸಂಪುಟದಲ್ಲಿ ಖಾಲಿ ಇರುವ ಸ್ಥಾನಗಳ ಭರ್ತಿ ಹಾಗೂ ಕೆಪಿಸಿಸಿ ಪದಾಧಿಕಾರಿಗಳ ಬದಲಾವಣೆಯನ್ನು ಪ್ರಮುಖ ಅಂಶಗಳನ್ನಿಟ್ಟುಕೊಂಡು ಚರ್ಚೆ ನಡೆದಿದೆ. ಕೆಪಿಸಿಸಿ ಯ 45 ಪದಾಧಿಕಾರಿಗಳ ಬದಲಾವಣೆ ಬಗ್ಗೆ ಚಿಂತನೆ ನಡೆಸಿದ್ದು, ಈ ಬಗ್ಗೆ ಪರಮೇಶ್ವರ್ ಅವರು ಸಿದ್ದರಾಮಯ್ಯ ಅವರ ಅಭಿಪ್ರಾಯ ಪಡೆದುಕೊಂಡಿದ್ದಾರೆ. ಸಚಿವ ಸ್ಥಾನದಿಂದ ನಿರ್ಗಮಿಸಲಿರುವಗೃಹ ಸಚಿವ ಡಾ.ಜಿ ಪರಮೇಶ್ವರ್ ಸೇರಿದಂತೆ ಸಚಿವ ಸಂಪುಟದಲ್ಲಿ ಖಾಲಿ ಇರುವ ಸ್ಥಾನಗಳಿಗೆ ಹೊಸದಾಗಿ ಮೂರು ಮಂದಿಗೆ ಅವಕಾಶ ಮಾ಼ಡಿಕೊಡಲು ನಿರ್ಧರಿಸಲಾಗಿದೆ.
Comments