ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ರಾಮ್ ನಾಥ್ ಕೋವಿಂದ್
ನವದೆಹಲಿ: ರಾಷ್ಟ್ರಪತಿ ಚುನಾವಣೆ ಎನ್ ಡಿಎ ಅಭ್ಯರ್ಥಿಯಾಗಿ ಬಿಹಾರದ ರಾಜ್ಯಪಾಲ ರಾಮ್ ನಾಥ್ ಕೋವಿಂದ್ ಅವರನ್ನು ಆಯ್ಕೆ ಮಾಡಲಾಗಿದೆ. ಇವತ್ತು ನಡೆದ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ರಾಮ್ ನಾಥ್ ಕೋವಿಂದ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ.
ಸದ್ಯಕ್ಕೆ ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಮಾಡಲಾಗಿದ್ದು, ಇನ್ನು ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಚರ್ಚೆ ನಡೆದಿಲ್ಲವೆಂದು ಅಮಿತ್ ಷಾ ಹೇಳಿದ್ದಾರೆ. ಈ ವೇಳೆ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ವೆಂಕಯ್ಯ ನಾಯ್ಡು. ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್, ನಿತಿನ್ ಗಡ್ಕರಿ ಉಪಸ್ಥಿತರಿದ್ದರು.
ಉತ್ತರಪ್ರದೇಶದ ಕಾನ್ ಪುರ್ ಜಿಲ್ಲೆಯ ದಲಿತ ಕುಟುಂಬಕ್ಕೆ ಸೇರಿದವರಾಗಿರುವ ರಾಮ್ ನಾಥ್, ಅಕ್ಟೋಬರ್ 1,1945ರಲ್ಲಿ ಜನಿಸಿದರು , ಸದ್ಯ ಬಿಹಾರ ರಾಜ್ಯಪಾಲರಾಗಿದ್ದಾರೆ. ರಾಮ್ ನಾಥ್ ವೃತ್ತಿಯಲ್ಲಿ ವಕೀಲರು, ದೆಹಲಿ, ಸುಪ್ರಿಂಕೋರ್ಟ್ ನಲ್ಲಿ ಸುಮಾರು 16 ವರ್ಷ ವಕೀಲರಾಗಿ ಸೇವೆ ಸಲ್ಲಿಸಿದ್ದಾರೆ. 90ರ ದಶಕದಲ್ಲಿ ರಾಜಕೀಯ ಪ್ರವೇಶಿಸಿದ ಅವರು, 1998-2002ರವರೆಗೆ ಬಿಜೆಪಿ ದಲಿತ ಮೋರ್ಚದ ಅಧ್ಯಕ್ಷರಾಗಿದ್ದರು.
Comments