ನಮ್ಮಲ್ಲಿ ಸಾಲ ಮನ್ನಾ ಏಕೆ ಆಗುತ್ತಿಲ್ಲ!?

20 Jun 2017 5:56 PM | Politics
697 Report

ಬೆಂಗಳೂರು: ಉತ್ತರ ಪ್ರದೇಶದಲ್ಲಿ ರೈತರ ಸಾಲ ಮನ್ನಾ ಮಾಡಲಾಗಿದೆ. ಕಾಂಗ್ರೆಸ್ ಆಡಳಿತವಿರುವ ಪಂಜಾಬ್ ನಲ್ಲೂ ಸಹ ರೈತರ ಸಾಲ ಮನ್ನಾ ಮಾಡಲಾಗಿದೆ. ಆದರೆ ಕರ್ನಾಟಕದಲ್ಲಿ ರೈತರ ಸಾಲ ಮನ್ನಾ ಯಾಕೆ ಮಾಡಲಾಗುತ್ತಿಲ್ಲ ಎಂದು ವಿಧಾನಸೌಧದಲ್ಲಿ ಯಲ್ಲಿ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜತೆ ಮಾತನಾಡಿದ ಅವರು, ದೇಶದ ಹಲವು ರಾಜ್ಯಗಳಲ್ಲಿನ ಸರ್ಕಾರಗಳು ರೈತರ ಸಾಲ ಮನ್ನಾ ಮಾಡುತ್ತಿವೆ. ಸಾಲ ಮನ್ನಾ ನಮ್ಮಲ್ಲಿ ಏಕೆ ಸಾಧ್ಯವಾಗುತ್ತಿಲ್ಲ ಎಂದು ಪ್ರಶ್ನಿಸಿದರು. ಮೇವು-ನೀರು ಇಲ್ಲದೆ ಜಾನುವಾರಗಳನ್ನು ಕಸಾಯಿಖಾನೆ ಮಾರಾಟ ಮಾಡುವ ದುಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ. ರೈತರ ಸಾಲ ಮನ್ನಾ ಮಾಡಿ ಅವರು ಬದುಕಲು ಅವಕಾಶ ಮಾಡಿಕೊಡಬೇಕೆಂದು ಬಿಜೆಪಿ ಸರ್ಕಾರಕ್ಕೆ ಒತ್ತಾಯ ಮಾಡುತ್ತಲೇ ಬಂದಿದೆ. ಆದ್ರೆ ಸಿಎಂ ಸಿದ್ದರಾಮಯ್ಯನವರು ಬರೀ ಭಾಗ್ಯಗಳನ್ನು ಘೋಷಿಸುತ್ತಾ ರೈತರ ಯೋಗಕ್ಷೇಮ ಮರೆತಿದ್ದಾರೆ ಎಂದರು.

Edited By

venki swamy

Reported By

Sudha Ujja

Comments