ದೆಹಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಮೂರು ಸ್ಥಾನಗಳ ಭರ್ತಿ ಮಾಡಿ ಸಂಪುಟ ವಿಸ್ತರಿಸಬೇಕು ಎಂಬ ಒತ್ತಡಗಳು ಕಾಂಗ್ರೆಸ್ ನಲ್ಲಿ ಹೆಚ್ಚುತ್ತಿರುವ ಹಿನ್ನಲೆ ಮುಖ್ಯಮತ್ರಿ ಸಿದ್ದರಾಮಯ್ಯ ಬುಧುವಾರ ಜೂ.28 ರಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.
28 ರಂದು ದೆಹಲಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸುವುದಾಗಿ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಎಚ್.ಸಿ ಮಹಾದೇವ ಪ್ರಸಾದ್, (ಅಕಾಲಿಕ ಮರಣ), ಡಾ.ಜಿ ಪರಮೇಶ್ವರ (ರಾಜೀನಾಮೆ), ಎಚ್.ವೈ ಮೇಟಿ (ರಾಜೀನಾಮೆ) ಅವರಿಂದ ತೆರವಾದ ಮೂರು ಸ್ಥಾನಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಸಂಜೆ ದೆಹಲಿಗೆ ತೆರಳಿ ವರಿಷ್ಠರ ಜತೆಗೆ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
Comments