ಉಪರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ಘೋಷಣೆ ಇಂದು

ಉಪರಾಷ್ಟ್ರಪತಿ ಹುದ್ದೆಗೆ ದಲಿತ ಮುಖಂಡ ಪ್ರಕಾಶ್ ಅಂಬೇಡ್ಕರ್ ಹೆಸರು ಯುಪಿಎಯಿಂದ ಘೋಷಣೆ ಯಾಗುವ ಸಾಧ್ಯತೆ
ದೆಹಲಿ: ಉಪರಾಷ್ಟ್ರಪತಿ ಚುನಾವಣೆ ಸಂಬಂಧ ಇವತ್ತನ ಎನ್ ಡಿಎ ಪಕ್ಷಗಳ ಸಭೆ ನಡೆಯಲಿದ್ದು, ಇಂದು ಅಭ್ಯರ್ಥಿ ಘೋಷಣೆ ಸಾಧ್ಯತೆ ಇದೆ. ನಿತೀಶ್ ಕುಮಾರ್ ಕಾಂಗ್ರೆಸ್ ನೇತೃತ್ವದಲ್ಲಿ ನಡೆಯಲಿರುವ ಸಭೆಗೆ ಗೈರಾಗಲಿದ್ದಾರೆ. ಇಂದು ಕಾಂಗ್ರೆಸ್ ನೇತೃತ್ವದ ಯುಪಿಎ ಗೆ ಹಿನ್ನಡೆಯುಂಟಾಗಲಿದ್ದು, ಪ್ರತಿಪಕ್ಷಗಳು ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿ ಘೋಷಣೆ ಮಾಡುವ ಸಂಬಂಧ ಸಭೆ ನಡೆಸಿದರೆ ನಿತೀಶ್ ಕುಮಾರ್ ಪಾಟ್ನಾದಲ್ಲಿ ಪಕ್ಷದ ಶಾಸಕರ ಸಭೆ ನಡೆಸಲಿದ್ದಾರೆ. ಶರದ್ ಯಾದವ್ ಪ್ರತಿಪಕ್ಷಗಳ ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆ ಗಳಿವೆ.
ಉಪರಾಷ್ಟ್ರಪತಿ ಹುದ್ದೆಗೆ ದಲಿತ ಮುಖಂಡ ಪ್ರಕಾಶ್ ಅಂಬೇಡ್ಕರ್ ಹೆಸರು ಯುಪಿಎಯಿಂದ ಘೋಷಣೆ ಯಾಗುವ ಸಾಧ್ಯತೆ ಇದೆ.ಪ್ರತಿಪಕ್ಷಗಳು ಮತ್ತೊಂದು ಗುಂಪು ಪಶ್ಚಿಮ ಬಂಗಾಳದ ರಾಜ್ಯಪಾಲ ಗೋಪಾಲ್ ಕೃಷ್ಣಾ ಗಾಂಧಿ ಅವರ ಹೆಸರನ್ನು ಸೂಚಿಸಿವೆ.
Comments