ತನಿಖೆಗೆ ಸಿಎಂ ಆದೇಶ

ಬೆಂಗಳೂರು: ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ ಉನ್ನತ ಮಟ್ಟದ ವಿಚಾರಣೆಗೆ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ. ಕಾರಾಗೃಹದಲ್ಲಿ ಬಂಧಿಯಾಗಿರುವ ಎಐಎಡಿಎಂಕೆ ಪ್ರಧಾನಕಾರ್ಯದರ್ಶಿ ವಿ.ಕೆ ಶಶಿಕಲಾಗೆ ವಿಶೇಷ ಆತಿಥ್ಯ ನೀಡಲು ಕಾರಾಗೃಹಗಳ ಇಲಾಖೆಯ ಅಧಿಕಾರಿಗಳು ಲಂಚ ಪಡೆದಿದ್ದಾರೆ
ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದ ಬಳಿಕ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯನವರು ಉನ್ನತ ಮಟ್ಟದ ತನಿಖೆ ನಡೆಸುವ ತೀರ್ಮಾನ ಕೈಗೊಂಡಿದ್ದಾರೆ.
ಕಾರಾಗೃಹದಲ್ಲಿ ನಡೆದಿದೆ ಎನ್ನಲಾದ ಚರ್ಚೆ ಅವ್ಯವಹಾರಗಳ ಬಗ್ಗೆ ಉನ್ನತ ಮಟ್ಟದಲ್ಲಿ ಸಮಗ್ರ ವಿಚಾರಣೆ ನಡೆಸಿ ಶೀರ್ಘದಲ್ಲೇ ವರದಿಸಲ್ಲಿಸುವಂತೆ ಮುಖ್ಯಮಂತ್ರಿ ಯವರು ಆದೇಶ ನೀಡಿದ್ದಾರೆ.
Comments