ಕೆಪಿಸಿಸಿಗೆ ಮೇಜರ್ ಸರ್ಜರಿ

ಬೆಂಗಳೂರು : ಮುಂಬರುವ ವಿಧಾನಸಭೆ ಚುನಾವಣೆಗೆ ಭರದ ಸಿದ್ಧತೆ ನಡೆಯುತ್ತಿದೆ. ಕಾಂಗ್ರೆಸ್ ಭಾರೀ ಮಟ್ಟದಲ್ಲಿ ಕೆಪಿಸಿಸಿ ಪುನರಚನೆ ಮಾಡಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಘಟಕಕ್ಕೆ ಡಾ.ಜಿ ಪರಮೇಶ್ವರ್ ಅವರು ಪುನರಾಯ್ಕೆಯಾದ ಬೆನ್ನಲ್ಲೇ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಒಪ್ಪಿಗೆ ಸೂಚಿಸಿದ್ದು, ಈಗ ಬಹಿರಂಗಗೊಳಿಸಲಾಗಿದೆ.
ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ ಲೆಕ್ಕಾಚಾರದಲ್ಲಿ ಪಟ್ಟಿ ಸಿದ್ಧಪಡಿಸಲಾಗಿದೆ. ಹಾಲಿ ಶಾಸಕರು, ಸಚಿವರನ್ನು ಪಕ್ಷದ ಪದಾಧಿಕಾರಿಗಳ ಹುದ್ದೆಯಿಂದ ಕೈ ಬಿಡಲಾಗಿದೆ. 96 ವರ್ಷದ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದ್ದು, ಯುವ ಮುಖಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಅಲ್ಲದೇ ಮಂತ್ರಿಗಳು ಹಾಗೂ ಹಿರಿಯ ನಾಯಕರು ಮಕ್ಕಳಿಗೆ ಪಕ್ಷದಲ್ಲಿ ಅವಕಾಶ ಕಲ್ಪಿಸಲಾಗಿದೆ.
ತೂಗು ದೀಪ ಶ್ರೀನಿವಾಸ ಪತ್ನಿ ಹಾಗೂ ನಟ ದರ್ಶನ ತಾಯಿ ಮೀನಾ ತೂಗುದೀಪ ಶ್ರೀನಿವಾಸ, ನಟಿ ಭಾವನಾ, ನಟ ಹಾಗೂ ನಿರ್ಮಾಪಕ ಮದನ್ ಮಲ್ಲು, ಸಚಿವ ಕಾಗೋಡು ತಿಮ್ಮಪ್ಪ ಅವರ ಮಗಳು ರಾಜನಂದಿನಿ, ರಾಜ್ಯಸಭಾ ಸದಸ್ಯ ಕೆ.ರೆಹಮಾನ್ ಪುತ್ರ ಮನ್ಸೂರ್ ರೆಹಮಾನ್ ಖಾನ್, ವಿಧಾನಸಭಾಧ್ಯಕ್ಷ ಕೆ.ಬಿ ಕೋಳಿವಾಡ ಅವರ ಪುತ್ರ ಪ್ರಕಾಶ್ ಕೋಳಿವಾಡ ಮಾಧ್ಯಮ ವಿಭಾಗದ ಉಸ್ತುವಾರಿ ಎಂ.ನಾರಾಯಣಸ್ವಾಮಿ ಪಕ್ಷದ ಪದಾಧಿಕಾರಿಗಳ ಪಟ್ಟಿಯಲ್ಲಿ ಕಾರ್ಯದರ್ಶಿ ಸ್ಥಾನ ಪಡೆದಿದ್ದಾರೆ.
Comments