ಭ್ರಷ್ಟಾಚಾರದಲ್ಲಿ ಕರ್ನಾಟಕ ನಂ-1,- ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ರಾಜ್ಯದಲ್ಲಿ ಭ್ರಷ್ಟಾಚಾರ ವ್ಯವಸ್ಥಿತವಾಗಿ ನಡೆಯುತ್ತಿದೆ. ಇಡೀ ದೇಶದಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂ-1 ಸ್ಥಾನದಲ್ಲಿದೆ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ನಗರದ ಗೋಕುಲ ರಸ್ತೆಯ ಮಯೂರ ಬಡಾವಣೆಯಲ್ಲಿ ಆಯೋಜಿಸಿದ್ದ ದತ್ತು ಶಾಲಾ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದಿನದಿಂದ ದಿನಕ್ಕೆ ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂದು ತಿಳಿಯುತ್ತಿಲ್ಲ. ಕಾನೂನು ಸುವವಸ್ಥೆ ಇಲ್ಲವೇ ಇಲ್ಲ. ಬೇಕಾಬಿಟ್ಟಿ ಆಡಳಿತ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಆಡಳಿತ ಸಂಪೂರ್ಣ ಕುಸಿದು ಹೋಗಿದ್ದು, ಇಲ್ಲಿ ಯಾರು ಹೇಳೋರು ಕೇಳೋರು ಇಲ್ಲದಂತಾಗಿದೆ. ಆಡಳಿತದಲ್ಲಿ ಬಿಗಿ ಇಲ್ಲ. ಆದ್ದರಿಂದ ಈ ಬೇಕಾಬಿಟ್ಟೆ ಆಡಳಿತ ನಡೆಯಲು ಕಾರಣವಾಗಿದೆ. ನಾನು ಈ ಹಿಂದೆ ಈ ಅಧಿವೇಶನದಲ್ಲಿ ಸಹ ಈ ಬಗ್ಗೆ ಪ್ರಸ್ತಾಪಿಸಿದ್ದೆ, ಆದರೂ ಏನು ಪ್ರಯೋಜನವಾಗಿಲ್ಲ ಎಂದು ಅವರು ತಿಳಿಸಿದರು. ಡಿ.ರೂಪಾ ಅವರು ಪರಪ್ಪನ ಅಗ್ರಹಾರ ಸೇರಿದಂತೆ ಕೆಲ ಕೈದಿಗಳಿಗೆ ನಡೆಯುತ್ತಿರುವ ವಿಶೇಷ ಆತಿಥ್ಯ. ಜನರಲ್ಲಿ ಸಂಶಯ ಮೂಡಿಸಿದೆ ಎಂದು ಹೇಳಿದರು.
Comments