ಬೆಂಗಳೂರಿಗೆ ರಾಹುಲ್ ಗಾಂಧಿ

ಬೆಂಗಳೂರು: ಡಾ.ಬಿ.ಆರ್ ಅಂಬೇಡ್ಕರ್ ಅವರ 125ನೇ ವರ್ಷಾಚರಣೆ ಅಂಗವಾಗಿ ಅಂತರಾಷ್ಟ್ರೀಯ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮಕ್ಕೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆಗಮಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರ ಜತೆಗೆ ಮಾತನಾಡಿ ಮೂರು ದಿನ ಸಮಾವೇಶ ನಡೆಯಲಿದ್ದು, ಸಮಾವೇಶದಲ್ಲಿ ಬೆಂಗಳೂರು ನಿರ್ಣಯ ಕೈಗೊಳ್ಳಲಾಗುವುದು. ಹಾಗೇ ಹೈದ್ರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ದೊರೆತಿರುವ ಹಿನ್ನಲೆಯಲ್ಲಿ ಆಗಸ್ಟ್ 4ರಂದು ರಾಯಚೂರಿನಲ್ಲಿ ವಿಶೇಷ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಆ ಕಾರ್ಯಕ್ರಮಕ್ಕೂ ರಾಹುಲ್ ಗಾಂಧಿ ಆಗಮಿಸಲಿದ್ದಾರೆ ಎಂದು ಹೇಳಿದರು. ಅಭ್ಯರ್ಥಿಗಳ ಆಯ್ಕೆ ಕುರಿತು ಈಗಾಗಲೇ ವಿಭಾಗವಾರು ಸಮೀಕ್ಷೆ ನಡೆಸಲಾಗುತ್ತಿದೆ. ಅಭ್ಯರ್ಥಿಗಳ ಆಯ್ಕೆಗೆ ಸಮೀಕ್ಷೆ ಒಂದೇ ಮಾನದಂಡವಾಗುವುದಿಲ್ಲ ಎಂದು ಹೇಳಿದರು.
Comments