ಡಿಐಜಿ ರೂಪಾ ವರ್ಗಾವಣೆ ಕೂಡಲೇ ರದ್ದು ಮಾಡಿ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ಅವ್ಯವಹಾರಗಳನ್ನು ಬಯಲಿಗೆಲೆದಿದ್ದ ಡಿಐಜಿ ರೂಪಾ ಅವರ ವರ್ಗಾವಣೆಯನ್ನು ಕೂಡಲೇರದ್ದುಗೊಳಿಸಬೇಕು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಈಶ್ವರಪ್ಪ ಒತ್ತಾಯಿಸಿದ್ದಾರೆ. ಮಾಧ್ಯಮರೊಂದಿಗೆ ಮಾತನಾಡಿ, ರೂಪಾ ಅವರನ್ನು ವರ್ಗಾವಣೆ ಮಾಡುವ ಉದ್ದೇಶ ಹೊಂದಿದ್ದ ರಾಜ್ಯ ಸರ್ಕಾರ ನೆಪಕ್ಕೆ ಮಾತ್ರ ಐವರು ಅಧಿಕಾರಿಗಳನ್ನು ವರ್ಗಾಯಿಸಿದೆ. ಸರಕಾರ ಭ್ರಷ್ಟ ಅಧಿಕಾರಿಗಳ ರಕ್ಷಣೆಗೆ ಮುಂದಾಗಿದೆ. ಜನತೆ ಎಲ್ಲವನ್ನು ನೋಡುತ್ತಿದ್ದು, ಮುಂಬರುವ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದ್ದಾರೆ.
Comments