ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ರಾಜೀನಾಮೆ
ದೆಹಲಿ: ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಸಂಸತ್ ಸದಸ್ಯತ್ವಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ.
ನಿನ್ನೆ ನಡೆದ ರಾಜ್ಯಸಭಾ ಕಲಾಪದ ವೇಳೆ ಸಹರಾನ್ ಪುರದಲ್ಲಿ ದಲಿತರ ಮೇಲಿನ ಹಿಂಸಾಚಾರಕ್ಕೆ ಕುರಿತಂತೆ ಮಾತನಾಡಲು ಸ್ಪೀಕರ್ ಅನುಮತಿ ನೀಡದ ಕಾರಣಕ್ಕೆ ಕೋಪಗೊಂಡ ಮಾಯಾವತಿ ರಾಜಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬಳಿಕ ಮಾಧ್ಯಮದವರ ಜತೆಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ಆಡಳಿತಕ್ಕೆ ಬಂದಾಗಿನಿಂದ ದಲಿತರ ಮೇಲಿನ ದೌರ್ಜನ್ಯ ಮೀತಿ ಮೀರಿದೆ. ದೋಷಪೂರಿತ ಎಲೆಕ್ಟ್ರಾನಿಕ್ ಮತಯಂತ್ರದಿಂದಾಗಿ ಉತ್ತರಪ್ರದೇಶದಲ್ಲಿ ಯೋಗಿ ಸರ್ಕಾರ ಆಡಳಿತ ಹಿಡಿಯುವಂತಾಯಿತು ಎಂದು ವಾಗ್ದಾಳಿ ನಡೆಸಿದ್ದಾರೆ.
Comments