ಲಿಂಗಾಯತ ಸ್ವತಂತ್ರ ಧರ್ಮ ಕೇಂದ್ರಕ್ಕೆ ಶಿಫಾರಸು- ಸಿಎಂ
ಧಾರವಾಡ: ಲಿಂಗಾಯತ ಹಾಗೂ ವೀರಶೈವ ಧರ್ಮ ಎಂಬ ಹೆಸರು ಇಡಬೇಕು ಎಂಬ ಸಲಹೆ ಈ ಹಿಂದೆಯೂ ಕೇಳಿ ಬಂದಿತ್ತು. ಆದರೆ ವೈಯಕ್ತಿಕವಾಗಿ ಲಿಂಗಾಯತ ಧರ್ಮ ಎಂಬುದೇ ಸೂಕ್ತ. ಈ ವಿಷಯದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲದೆ ಒಂದೇ ಧ್ವನಿಯಾದರೆ ಶಿಫಾರಸ್ಸು ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಕಡ್ಡಾಯಗೊಳಿಸಿದ್ದಕ್ಕೆ ಹಾಗೂ ವಿಜಯಪೂರ ಮಹಿಳಾ ವಿಶ್ವವಿದ್ಯಾಲಯಕ್ಕೆ ಅಕ್ಕಮಹಾದೇವಿ ಹೆಸರು ನಾಮಕರಣ ಮಾಡಿದ್ದಕ್ಕಾಗಿ ಇಲ್ಲಿನ ಮುರುಘಾಮಠದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.
ಈ ವಿಷಯದಲ್ಲಿ ರಾಜಕೀಯ ಮಾಡುತ್ತಿಲ್ಲ, ಬಸವಣ್ಣನ ಬಗ್ಗೆ ಅಪಾರ ಗೌರವ ಇದೆ. ಜತೆಗೆ ಅವರ ತತ್ವಕ್ಕೆ ನಿಷ್ಠೆಯೂ ಇದೆ. ಆ ಬದ್ಧತೆಯಿಂದಲೇ ಈ ಮಾತುಗಳನ್ನು ಆಡುತ್ತಿದ್ದೇನೆ ಎಂದು ಹೇಳಿದರು. ಲಿಂಗಾಯತ ಹಾಗೂ ವೀರಶೈವ ಎಂಬ ಹೆಸರು ಇಡಬೇಕು ಎಂಬ ಸಲಹೆ ಈ ಹಿಂದೆಯೇ ಕೇಳಿ ಬಂದಿತ್ತು. ಆದರೆ ವೈಯಕ್ತಿಕವಾಗಿ ಲಿಂಗಾಯತ ಧರ್ಮ ಎಂಬುದೇ ಸೂಕ್ತ. ಈ ವಿಷಯದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲದೇ ಒಂದೇ ಧ್ವನಿಯಾದರೆ ಶಿಫಾರಸು ಮಾಡುತ್ತೇನೆ ಎಂದು ಹೇಳಿದರು.
Comments