ಬಿಹಾರದಲ್ಲಿ ಜೆಡಿಯು-ಬಿಜೆಪಿ ಮೈತ್ರಿ ಸರ್ಕಾರ
ಪಾಟ್ನಾ: ಆರ್‌ಜೆಡಿ, ಕಾಂಗ್ರೆಸ್ ಜತೆಗಿನ ಮಹಾಮೈತ್ರಿಕೂಟ ಸರ್ಕಾರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಿತೀಶ್ ಕುಮಾರ್, ಎನ್ ಡಿಎ ಕೂಟ ಸೇರಿದ್ದಾರೆ. ಎನ್‌ಡಿಎ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಇಂದು ನಿತೀಶ್ ಕುಮಾರ್ ಮತ್ತೊಮ್ಮೆ ಬಿಹಾರ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ.ತಡರಾತ್ರಿ ನಡೆದ ದಿಢೀರ್ ಬೆಳವಣಿಗೆಯಲ್ಲಿ ಸರ್ಕಾರ ರಚನೆಗೆ ಹಕ್ಕು ಪ್ರತಿಪಾದಿಸಲು ಆರ್‌ಜೆಡಿಗೆ ಅವಕಾಶ ದೊರೆಯದಂತೆ ಮಾಡಲು ಇಂದು ಬೆಳಿಗ್ಗೆ 10ಗಂಟೆಗೇ ನಿತೀಶ್ ಕುಮಾರ್ ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವುದು ಖಚಿತವಾಗಿದ್ದು,
ನಿತೀಶ್ ನೇತೃತ್ವದ ಹೊಸ ಸರ್ಕಾರ ರಚನೆಗೆ ಬಿಜೆಪಿ ಬೆಂಬಲಪತ್ರವನ್ನು ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಅವರಿಗೆ ಸಲ್ಲಿಸಲಾಗಿದೆ. ತಡರಾತ್ರಿ ರಾಜ್ಯಪಾಲರನ್ನು ಭೇಟಿಯಾದ ಉಭಯ ಬಣಗಳ ಮುಖಂಡರು ಜೆಡಿಯು–ಬಿಜೆಪಿ ಮೈತ್ರಿಕೂಟಕ್ಕೆ 132 ಶಾಸಕರ ಬೆಂಬಲ ಇದ್ದು, ಸರ್ಕಾರ ರಚಿಸಲು ಆಹ್ವಾನ ನೀಡಬೇಕು ಎಂದು ಮನವಿ ಮಾಡಿದರು. ಇನ್ನು ಹೊಸ ಸರ್ಕಾರದಲ್ಲಿ ಸುಶೀಲ್ ಮೋದಿ ಉಪ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಮಾತುಗಳೂ ಕೇಳಿಬರುತ್ತಿದೆ.
Comments