ಸದ್ಯ ಕುಡಿಯುವ ನೀರಿಗೆ ಸರ್ಕಾರದ ಆದ್ಯತೆ- ಸಿಎಂ

ಬೆಂಗಳೂರು: ಕೃಷಿ ಕಾರ್ಯಗಳಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಮಂಡ್ಯ, ಮೈಸೂರು ಭಾಗಗಳಲ್ಲಿ ಜೆಡಿಎಸ್ ನೇತೃತ್ವದಲ್ಲಿ ರೈತರ ಪ್ರತಿಭಟನೆ ನಡೆಯುತ್ತಿದೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಪ್ರಸ್ತುತ ಸ್ಥಿತಿ ಯಲ್ಲಿ ಜನರಿಗೆ ಕುಡಿಯುವ ನೀರು ಸಂಗ್ರಹಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.
ಕಾವೇರಿ ಜಲಾನಯನದ ನಾಲ್ಕು ಜಲಾಶಯಗಳಲ್ಲಿ ಶೇಕಡಾ 50ಕ್ಕಿಂತಲೂ ಕಡಿಮೆ ನೀರು ಸಂಗ್ರಹವಿದ್ದು, ಇದರಿಂದಾಗಿ
ಕೃಷಿ ನೀರಾವರಿಗೆ ನೀರು ಬಿಡುಗಡೆ ಮಾಡುವುದು ಸರ್ಕಾರಕ್ಕೆ ಕಷ್ಟವಾಗುತ್ತದೆ. ಈ ವಿಷಯವನ್ನು ಆಗಸ್ಟ್ 5ರಂದು
ನಡೆಯುವ ಸರ್ವಪಕ್ಷ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು.
ನಿನ್ನೆ ಮೈಸೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿ ಕಾವೇರಿ ನ್ಯಾಯಾಧೀಕರಣ ಆದೇಶದಂತೆ ತಮಿಳುನಾಡಿಗೆ ಕಾವೇರಿ ನೀರು
ಬಿಡುಗಡೆ ಮಾಡುವ ಕುರಿತು ಸರ್ಕಾರದ ನಿರ್ಧಾರವನ್ನು ಅವರು ಸಮರ್ಥಿಸಿದರು.
Comments