ಕರ್ನಾಟಕ ಬಿಜೆಪಿ ಉಸ್ತುವಾರಿ ಬದಲು? ಮುರಳೀಧರ ರಾವ್ ಗೆ ಕೊಕ್?

ಕರ್ನಾಟಕದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಉಸ್ತುವಾರಿ ವಹಿಸಿಕೊಂಡಿದ್ದ ಮುರಳೀಧರ ರಾವ್ ಅವರನ್ನು ಬದಲಾಯಿಸಿ ಆ ಜಾಗಕ್ಕೆ ಆರೆಸ್ಸೆಸ್ ನ ಹಿರಿಯ ಮುಖಂಡ ರಾಮ್ ಮಾಧವ್ ಅವರನ್ನು ತಂದು ಕೂರಿಸಲು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.
ರಾಮ್ ಮಾಧವ್ ಅವರು ಸದ್ಯಕ್ಕೆ ಜಮ್ಮು- ಕಾಶ್ಮೀರದಲ್ಲಿ ಬಿಜೆಪಿ ಪಕ್ಷದ ಉಸ್ತುವಾರಿ ವಹಿಸಿಕೊಂಡಿದ್ದು ಕರ್ನಾಟಕದಲ್ಲಿ ಬಿಜೆಪಿ ಉಸ್ತುವಾರಿಗೆ ಅವರೇ ಸೂಕ್ತವೆಂದು ಖುದ್ದು ಆರೆಸ್ಸೆಸ್ ಕೂಡ ಬಿಜೆಪಿಗೆ ಶಿಫಾರಸು ಮಾಡಿದೆ ಎನ್ನಲಾಗಿದೆ.
ಚುನಾವಣೆಯ ಹೊಸ್ತಿಲಲ್ಲಿರುವಾಗಲೇ ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಅನಿಸಿಕೆ ಎಲ್ಲರಲ್ಲಿ ಇರುವುದರಿಂದ ತುರ್ತಾಗಿ ಇಲ್ಲಿರುವ ಭಿನ್ನಮತಗಳು ಉಪಶಮನ ಆಗಬೇಕಿದೆ. ಈ ಹಿನ್ನೆಲೆಯಲ್ಲಿ, ಪಕ್ಷದ ಉಸ್ತುವಾರಿಯನ್ನು ಬದಲಾಯಿಸಲು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.
ಹೀಗೆ, ದಿಢೀರ್ ಎಂದು ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಸಿದ್ಧವಾಗಿದ್ದಾರೂ ಏಕೆ, ಇದು ದಕ್ಷಿಣ ಭಾರತದಲ್ಲಿ 'ಕಮಲ' ಅರಳಿಸುವ ತಂತ್ರಗಾರಿಕೆಯೇ? ಎಂಬಿತ್ಯಾದಿ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.
Comments