13ನೇ ಉಪರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಪ್ರಮಾಣ ವಚನ
ನವದೆಹಲಿ: ದೇಶದ 13ನೇ ರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಶುಕ್ರವಾರ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಉಪರಾಷ್ಟ್ರಪತಿಯಾಗಿದ್ದ ಹಮೀದ್ ಅನ್ಸಾರಿ ಅವರ ಅಧಿಕಾರದ ಅವಧಿ ಗುರುವಾರ ಕೊನೆಗೊಂಡಿತ್ತು.
ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಬಿಜೆಪಿ ಮುಖಂಡ ಲಾಲ್ ಕೃಷ್ಣ ಅಡ್ವಾಣಿ, ಹಮೀದ್ ಅನ್ಸಾರಿ, ಅಮಿತ್ ಷಾ , ಸಚಿವೆ ಸ್ಮೃತಿ ಇರಾನಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾದರು.
Comments