ಜೆಡಿಎಸ್`ನ 7 ಬಂಡಾಯ ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್
ಜೆಡಿಎಸ್`ನಿಂದ ಅಮಾನತಾಗಿರುವ 7 ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಕಾಲ ಕೂಡಿ ಬಂದಿದೆ. ಡಿಸೆಂಬರ್ ತಿಂಗಳಿನಲ್ಲಿ ಎಲ್ಲರೂ ಕಾಂಗ್ರೆಸ್ ಸೇರುವುದಾಗಿ ಶಾಸಕ ಜಮೀರ್ ಅಹಮ್ಮದ್ ಮಾಧ್ಯಮಗಳಿಗೆ ತಿಳಿಸಿದ್ಧಾರೆ.
ಡಿಸೆಂಬರ್ ಮೊದಲ ವಾರದಲ್ಲಿ 7 ಶಾಸಕರೂ ಕಾಂಗ್ರೆಸ್ ಪಕ್ಷ ಸೇರುತ್ತೇವೆ. ಇದಕ್ಕೂ ಮುನ್ನ ನವದೆಹಲಿಗೆ ತೆರಳಿ ಹೈಕಮಾಂಡ್ ಭೇಟಿಯಾಗಿ ಮಾತುಕತೆ ನಡೆಸುತ್ತೇವೆ. ಬೃಹತ್ ಸಮಾವೇಶ ನಡೆಸಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದೇವೆ ಎಂದು ತಿಳಿಸಿದ್ದಾರೆ.
ಕಳೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಸಿ. ರಾಮಮೂರ್ತಿಗೆ ಅಡ್ಡ ಮತದಾನ ಮಾಡಿದ್ದ 7 ಶಾಸಕರು ಜೆಡಿಎಸ್`ನಿಂದ ಅಮಾನತುಗೊಂಡಿದ್ದರು. ಆದರೆ, ಆ ಬಳಿಕ ಜೆಡಿಎಸ್ ಪಕ್ಷದಿಮದ ದೂರವೇ ಉಳಿದ ಶಾಸಕರು ಕಾಂಗ್ರೆಸ್ ನಾಯಕರ ಜೊತೆಯೇ ಗುರುತಿಸಿಕೊಂಡಿದ್ದರು.
Comments