ಉಪ್ಪಿ ರಾಜಕೀಯಕ್ಕೆ ದೊಡ್ಡಗೌಡರ ಪ್ರತಿಕ್ರಿಯೆ

ನಟ ಉಪೇಂದ್ರ ರಾಜಕೀಯಕ್ಕೆ ಪ್ರವೇಶಿಸಿದ್ದು, ಹೊಸ ಪಕ್ಷ ಕಟ್ಟುವುದಾಗಿ ಘೋಷಿಸಿದ್ದಾರೆ. ಈ ಮಧ್ಯೆ, ರಾಜ್ಯದ ಪ್ರಭಾವಿ ನಾಯಕ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಚಿಕ್ಕಮಗಳೂರಿನ ಕಡೂರಿನಲ್ಲಿ ಆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಉಪೇಂದ್ರ ಅವರು ರಾಜಕೀಯಕ್ಕೆ ಪ್ರವೇಶಿಸಿರುವ ಕುರಿತು ನಿಮ್ಮ ಅಭಿಪ್ರಾಯ ಏನು ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ದೇವೇಗೌಡರು ‘ನೋ ಕಾಮೆಂಟ್ಸ್’ ಎಂದು ಸೂಚ್ಯವಾಗಿ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಮತ್ತು ಕಾಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ರಾಜ್ಯ ಪ್ರವಾಸದ ಕುರಿತು ಮಾತನಾಡಿದ ದೇವೇಗೌಡರು ರಾಷ್ಟ್ರೀಯ ಪಕ್ಷಗಳನ್ನು ಎದುರಿಸುವ ಶಕ್ತಿ ನಮಗಿದೆ. ಜತೆಗೆ ನನಗೆ ರಾಜ್ಯದ ಜನರ ಮೇಲೆಯೂ ವಿಶ್ವಾಸವಿದೆ ಎಂದು ಮಾರ್ಮಿಕವಾಗಿ ತಿಳಿಸಿದರು.
Comments