ಬಿ ಎಸ್ ಯಡಿಯೂರಪ್ಪನೇ ಮುಂದಿನ ಸಿಎಂ: ಅಮಿತ್ ಶಾ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ನಮ್ಮ ಮುಂದಿನ ಮುಖ್ಯಮಂತ್ರಿ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಬಿಎಸ್ ವೈ ಬೆನ್ನು ತಟ್ಟಿದ್ದಾರೆ.
ಮೂರು ದಿನಗಳ ರಾಜ್ಯ ಭೇಟಿಗಾಗಿ ಇಂದು ಬೆಂಗಳೂರಿಗೆ ಆಗಮಿಸಿರುವ ಅಮಿತ್ ಶಾ ಕೆಂಪೇಗೌಡ ವಿಮಾನ ನಿಲ್ದಾಣ ಸಮೀಪದ ಸಾದಹಳ್ಳಿ ಗೇಟ್ ಬಳಿ ಸೇರಿದ್ದ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಈ ಬಾರಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ದಕ್ಷಿಣ ಭಾರತದಲ್ಲಿ ಮತ್ತೆ ಬಿಜೆಪಿ ಗೆಲುವನ್ನ ಆರಂಭಿಸಲಿದೆ. ಬಿಜೆಪಿ ಗೆಲುವಿಗೆ ಕರ್ನಾಟಕ ಮುನ್ನುಡಿ ಬರೆಯಲಿದೆ ಎಂದರು.
2018ರಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸಲು ಸೈನಿಕರಂತೆ ಹೋರಾಟ ಮಾಡಬೇಕು ಎಂದು ಪಕ್ಷದ ಕಾರ್ಯಕರ್ತರಿಗೆ ಕರೆ ಕರೆ ನೀಡಿದರು.
ಕರ್ನಾಟಕದ ಜನ ಈಗಾಗಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ನಿರ್ಧರಿಸಿದ್ದಾರೆ. ಯಡಿಯೂರಪ್ಪ ನೇತೃತ್ವದಲ್ಲಿ ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಪ್ರಧಾನಿ ನರೇಂದ್ರ ಮೋದಿ ಗೆಲುವಿನ ರಥವನ್ನು ಕರ್ನಾಟಕದಲ್ಲೂ ಯಶಸ್ವಿಗೊಳಿಸಿ ಎಂದು ಅಮಿತ್ ಶಾ ಕರೆ ನೀಡಿದರು.
Comments