ಮಹಾಮಸ್ತಕಾಭಿಷೇಕ ಕಾಮಗಾರಿ ವಿಳಂಬ: ಗೌಡರ ಎಚ್ಚರಿಕೆಯ ಮಾತು
ಹಾಸನ: ‘ಮಹಾಮಸ್ತಕಾಭಿಷೇಕ ಕೆಲಸ ವಿಳಂಬವಾಗುತ್ತಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಠಿಣ ಶಬ್ದಗಳಲ್ಲಿ ಪತ್ರ ಬರೆದಿದ್ದೇನೆ. ಸರಿಯಾದ ರೀತಿಯಲ್ಲಿ ಮಹೋತ್ಸವ ನಡೆಸದಿದ್ದರೆ ನಿಮಗೆ ಕೆಟ್ಟ ಹೆಸರು ಬರಲಿದೆ ಎಂದು ಎಚ್ಚರಿಸಿದ್ದೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹೇಳಿದರು.
ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆ ರಂಗನಾಥಸ್ವಾಮಿಗೆ ಶನಿವಾರ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿ, ‘ಇನ್ನೂ ಅಟ್ಟಣಿಗೆ ನಿರ್ಮಾಣ ಕಾರ್ಯ ಶುರುವಾಗಿಲ್ಲ. ರಸ್ತೆ ಅಭಿವೃದ್ಧಿ ನಿಗಮಕ್ಕೆ (ಕೆಆರ್‌ಡಿಸಿಎಲ್) ನಿರ್ಮಾಣದ ಹೊಣೆ ವಹಿಸಲಾಗಿದೆ. ಆದರೆ, ಕೆಲಸ ಕಾರ್ಯಗಳ ಬಗ್ಗೆ ಮೇಲ್ವಿಚಾರಣೆ ಮಾಡಲು ಆ ಇಲಾಖೆಯಲ್ಲಿ ಎಂಜಿನಿಯರ್‌ಗಳೇ ಇಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.
ಮನವಿ ಪರಿಶೀಲಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದ ಸಂದರ್ಭದಲ್ಲಿ ಹಠಮಾರಿತನ ಬಿಟ್ಟು ಕನಿಷ್ಠ ₹ 100 ಕೋಟಿ ಅನುದಾನ ನೀಡುವಂತೆ ಮನವಿ ಮಾಡಿದ್ದೇನೆ ಎಂದರು.
Comments