ಸಿಎಂ ಸಿದ್ದರಾಮಯ್ಯ ವಿರುದ್ಧ ಎಚ್ಡಿಕೆ ಹೊಸ ಬಾಂಬ್..!
ಬೆಂಗಳೂರು: ಅರ್ಕಾವತಿ ಬಡಾವಣೆ ಡಿ ನೋಟಿಫಿಕೇಷನ್ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಕೋಟ್ಯಂತರ ರೂ ಅವ್ಯವಹಾರ ನಡೆಸಿರುವ ಹಗರಣವನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬಯಲಿಗೆ ತರುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ.
ಬಿಬಿಎಂಪಿಯಲ್ಲಿ ಕೋಟ್ಯಂತರ ರೂ. ಕೊಳ್ಳೆ ಹೊಡೆಯುತ್ತಿದ್ದು, ಇಂತಹವರಿಗೆ ಮುಂದಿನ ದಿನಗಳಲ್ಲಿ ನಾವು ಬೆಂಬಲ ನೀಡಬೇಕೇ ಬೇಡವೇ ಎಂಬುದರ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.
ಸಿಎಂ ಹಲವಾರು ಪೋಳ್ಳು ಭರವಸೆಗಳನ್ನು ನೀಡುತ್ತಾ ಜನರ ಹಾದಿಯನ್ನು ತಪ್ಪು ದಾರಿಗೆ ಎಳೆಯುವ ಕೆಲಸ ಮಾಡುತ್ತಿದ್ದಾರೆ. ಇದೊಂದು ದೊಡ್ಡ ಭ್ರಷ್ಟಾಚಾರ ಸರ್ಕಾರ ಎಂದು ಇಂದಿಲ್ಲಿ ಕಿಡಿಕಾರಿದ್ದಾರೆ.
Comments