ಆಗಸ್ಟ್ 18ರಂದು ಬಿಜೆಪಿಯಿಂದ ವಿಧಾನಸೌಧ ಚಲೋ
ಬೆಂಗಳೂರು: ಶುಕ್ರವಾರ ಅಂದರೆ ಆಗಸ್ಟ್ 18ರಂದು ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಸಚಿವರ ರಾಜಿನಾಮೆಗೆ ಒತ್ತಾಯಿಸಿ ಬಿಜೆಪಿ 'ವಿಧಾನಸೌಧ ಚಲೋ' ಕಾರ್ಯಕ್ರಮವನ್ನು ಆಯೋಜಿಸಿದೆ.
ಬೆಳಿಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕ್ ನಿಂದ ಭಾರೀ ಪ್ರತಿಭಟನೆ ಆರಂಭವಾಗಲಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಆರ್.ಅಶೋಕ್ ಪ್ರತಿಭಟನೆಯ ನೇತೃತ್ವ ವಹಿಸಲಿದ್ದಾರೆ.
ಬಿಜೆಪಿಯ ಬೆಂಗಳೂರು ನಗರ ಅಧ್ಯಕ್ಷ ಪಿ.ಎನ್. ಸದಾಶಿವ, ಬೆಂಗಳೂರು ನಗರ ಜಿಲ್ಲೆ ಅಧ್ಯಕ್ಷ ಎಸ್. ಮುನಿರಾಜು, ಬೆಂಗಳೂರು ಮಹಾನಗರದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಬಿಬಿಎಂಪಿ ಸದಸ್ಯರು, ಬೆಂಗಳೂರು ನಗರ ಮತ್ತು ನಗರ ಜಿಲ್ಲೆ ಪದಾಧಿಕಾರಿಗಳು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
Comments