ಕಾಂಗ್ರೆಸ್ ವಿರುದ್ಧ ತೊಡೆ ತಟ್ಟಿದ ಬಿಜೆಪಿ
ಬೆಂಗಳೂರು: ಬಿಜೆಪಿ ರಾಷ್ಟ್ರಿಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಭೇಟಿ ಕೊಟ್ಟ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಬಿಜೆಪಿ ಘಟಕ ಒಂದು ವಾರಗಳ ಕಾಲ ಪ್ರತಿಭಟನೆ ನಡೆಸಲು ಮುಂದಾಗಿದೆ.
ಭ್ರಷ್ಟಾಚಾರವನ್ನೇ ಪ್ರಮುಖ ಅಸ್ತ್ರವನ್ನಾಗಿ ಬಳಸಿಕೊಂಡು ಹೋರಾಟಕ್ಕೆ ಸಿದ್ದವಾಗಿರುವ ಬಿಜೆಪಿ ರಾಜ್ಯ ಘಟಕ ಇಂದು ವಿಧಾನ ಸಭಾ ಚಲೋ ಪ್ರತಿಭಟನೆ ನಡೆಸುತ್ತಿದೆ. ಐಟಿ ದಾಳಿಗೆ ಒಳಗಾಗಿರುವ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಸಣ್ಣ ಕೈಗಾರಿಕೆ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಫ್ರೀಡಂ ಪಾರ್ಕ್'ನಲ್ಲಿ ಪ್ರತಿಭಟನೆ ಆರಂಭಿಸಿದೆ.
ನಾಳೆಯಿಂದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲೂ ಪಂಜಿನ ಮೆರವಣಿಗೆಗಳ ಮೂಲಕ ಪ್ರತಿಭಟನೆ ನಡೆಸಲು ಬಿಜೆಪಿ ತೀರ್ಮಾನಿಸಿದೆ.
ಇದೇ ವೇಳೆ ಮಾತನಾಡಿದ ಬಿಜೆಪಿ ಮುಖಂಡ ಆರ್. ಅಶೋಕ್, ಕಾಂಗ್ರೆಸ್'ನ ಡಿಕೆ ಶಿವಕುಮಾರ್, ರಮೇಶ್ ಜಾರಕಿಹೊಳಿ ಸೇರಿದಂತೆ ರಾಜ್ಯದ ಹತ್ತಕ್ಕೂ ಹೆಚ್ಚು ಸಚಿವರು ಭ್ರಷ್ಟಾಚಾರ ಕೂಪದಲ್ಲಿ ಮುಳುಗಿದ್ದಾರೆ. ರಾಜ್ಯವನ್ನು ಲೂಟಿ ಹೊಡೆಯುತ್ತಿರುವ ಸರ್ಕಾರದ ವಿರುದ್ದ ಯುಡಿಯೂರೊಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.
ಬಹಿರಂಗ ಪ್ರತಿಭಟನೆಯ ವೇಳೆ ಸಿ.ಟಿ. ರವಿ, ಶೋಭ ಕರಂದ್ಲಾಜೆ, ಈಶ್ವರಪ್ಪ ಮುಂತಾದ ಹಿರಿಯ ನಾಯಕರು ಹಾಜರಿದ್ದರು.
Comments