'ಇಂದಿರಾ ಕ್ಯಾಂಟೀನ್' ಆಹಾರದಲ್ಲಿ ಏನಾದ್ರು ಮಿಶ್ರಣ ಮಾಡಬಹುದು!?- ಗುಂಡೂರಾವ್
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾಗಿರುವ ಇಂದಿರಾ ಕ್ಯಾಂಟೀನ್ ಜನಪ್ರಿಯತೆ ಸಹಿಸಲಾಗದೆ ಬಿಜೆಪಿ ಅವರು ಆಹಾರದಲ್ಲಿ ಏನಾದ್ರು ಮಿಶ್ರಣ ಮಾಡಿ ಸರ್ಕಾರಕ್ಕೆಕೆಟ್ಟ ಹೆಸರು ತರುವ ಪ್ರಯತ್ನ ನಡೆಸಿದರೂ ನಡೆಸಬಹುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಕುರಿತು ಕಾಂಗ್ರೆಸ್ ಕಾರ್ಯಕರ್ತರು ಎಚ್ಚರಿಕೆ ವಹಿಸಬೇಕು ಎಂದಿದ್ದಾರೆ.
ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗ ಭಾನುವಾರ ಪುರಭವನ ಆಯೋಜಿಸಿದ್ದ ಮಾಜಿ ಪ್ರಧಾನಿ ಡಿ. ರಾಜೀವ್ ಗಾಂಧಿ ಮತ್ತು ಮಾಜಿ ಸಿಎಂ ದಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಉದ್ಯಾನ ನಗರಿಯ ಬಡ ಜನರಿಗಾಗಿ ರಾಜ್ಯ ಸರ್ಕಾರ ಅತ್ಯಂತ ಕಡಿಮೆ ದರದಲ್ಲಿ ತಿಂಡಿ, ಊಟ ನೀಡುವ ಇಂದಿರಾ ಕ್ಯಾಂಟೀನ್ ಯೋಜನೆ ಜಾರಿಗೆ ತಂದಿದೆ.
ಎಲ್ಲೆಡೆ ಈ ಯೋಜನೆಯ ಉತ್ತಮ ಜನಪ್ರಿಯತೆ ವ್ಯಕ್ತವಾಗುತ್ತಿದೆ. ಆದ್ರೆ, ಬಿಜೆಪಿ ಯವರು ತಾವಂತೂ ಇಂತಹ ಒಂದು ಜಾರಿಗೆ ತರಲಾಗದಿದ್ದರೂ ಬಿಜೆಪಿಯವರು ಕಾಂಗ್ರೆಸ್ ಸರ್ಕಾರದ ಯೋಜನೆಗೆ ವಿವಾದಗಳ ಮೂಲಕ ಅಡ್ಡಿ ಪಡಿಸುವ ಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
Comments