ಮೋದಿ ಸಂಪುಟದಿಂದ 6 ಸಚಿವರಿಗೆ ಗೇಟ್ ಪಾಸ್..?

24 Aug 2017 4:06 PM | Politics
1002 Report

ನವದೆಹಲಿ: ಬಹುನಿರೀಕ್ಷಿತ ಕೇಂದ್ರ ಸಚಿವ ಸಂಪುಟ ಪುನಾರಚನೆ ಒಂದು ವಾರದೊಳಗೆ ನಡೆಯಲಿದ್ದು, ಭಾರಿ ಬದಲಾವಣೆಗಳು ಆಗಲಿವೆ ಎಂದು ಹೇಳಲಾಗಿದೆ.

ಲೋಕಸಭೆ ಚುನಾವಣೆಗೆ ಎರಡು ವರ್ಷಕ್ಕಿಂತ ಕಡಿಮೆ ಅವಧಿ ಇರುವ ಹಿನ್ನೆಲೆಯಲ್ಲಿ 6 ಸಚಿವರ ರಾಜೀನಾಮೆ ಪಡೆದು, ಅವರನ್ನು ಪಕ್ಷದ ಕೆಲಸಕ್ಕೆ ನಿಯೋಜಿಸಲಾಗುತ್ತದೆ. 13 ಸಚಿವರ ಖಾತೆಯಲ್ಲಿ ಬದಲಾವಣೆಯಾಗಲಿದೆ ಎಂದು ಸುದ್ದಿವಾಹಿನಿಯೊಂದು ವರದಿ ಮಾಡಿದೆ.

ಸಚಿವರಾದ ಪೀಯೂಷ್ ಗೋಯೆಲ್, ಧರ್ಮೇಂದ್ರ ಪ್ರದಾನ್, ರಾಜ್ಯವರ್ಧನ ಸಿಂಗ್ ರಾಥೋಡ್, ಜಿತೇಂದ್ರ ಸಿಂಗ್ ಅವರಿಗೆ ಸಂಪುಟ ದರ್ಜೆಗೆ ಬಡ್ತಿ ಸಿಗುವ ನಿರೀಕ್ಷೆ ಇದೆ ಎಂದು ‘ರಿಪಬ್ಲಿಕ್’ ಟೀವಿ ವರದಿ ತಿಳಿಸಿದೆ.

Courtesy: Public tv

Comments